ಶ್ರೀಲಂಕಾ ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ಪ್ರಮಾಣ; ಜು.20ಕ್ಕೆ ನೂತನ ಅಧ್ಯಕ್ಷರ ಆಯ್ಕೆ
ಕೊಲಂಬೋ; ಗೊಟಬಯ ರಾಜೀನಾಮೆ ನೀಡಿರುವುದರಿಂದ ಶ್ರೀಲಂಕಾ ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಜಯಂತ ಜಯಸೂರ್ಯ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.
ಇದೇ ವೇಳೆ ಮಾತನಾಡಿರುವ ರಾನಿಲ್ ವಿಕ್ರಮ ಸಿಂಘೆ ಅವರು, ನಾನು ಶಾಂತಿಯುತವಾಗಿ ಪ್ರತಿಭಟಿಸುವವರ ಪರವಾಗಿ ಇದ್ದೇನೆ. ಪ್ರತಿಭಟನಕಾರರು ಹಾಗೂ ಗಲಭೆಕೋರರ ನಡುವೆ ವ್ಯತ್ಯಾಸವಿದೆ. ಹೀಗಾಗಿ ಹಿಂಸಾಚಾರ ಹಾಗೂ ವಿಧ್ವಂಸಕ ಕೃತ್ಯಗಳನ್ನು ಹತ್ತಿಕ್ಕುವ ಸಲುವಾಗಿ ಸಶಸ್ತ್ರ ಪಡೆಗಳಿಗೆ ಪೂರ್ಣ ಅಧಿಕಾರ ನೀಡಲಾಗಿದೆ ಎಂದಿದ್ದಾರೆ. ಇನ್ನು ಜುಲೈ 20 ರಂದು ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜುಲೈ 19ರಂದು ನಾಮಪತ್ರ ಸಲ್ಲಿಕೆ ನಡೆಯಲಿದೆ ಎಂದು ತಿಳಿದುಬಂದಿದೆ.