ಇಸ್ರೇಲ್‌ನಲ್ಲಿ ಭಯೋತ್ಪಾದಕ ದಾಳಿ; 8 ಮಂದಿ ದುರ್ಮರಣ!
ಟೆಲ್ ಅವಿವ್; ಇಸ್ರೇಲ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದೆ.. ಮಂಗಳವಾರ ತಡರಾತ್ರಿ ಇಸ್ರೇಲ್ ಟೆಲ್ ಅವಿವ್‌ನ ಜಾಫಾ ಪಟ್ಟಣಕ್ಕೆ ಭಯೋತ್ಪಾದಕರು ನುಗ್ಗಿ ಗುಂಡಿನ ದಾಳಿ ನಡೆಸಿದ್ದಾರೆ.. ಸಿಕ್ಕ ಸಿಕ್ಕಲ್ಲಿ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಟ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ..
ಇಬ್ಬರು ಭಯೋತ್ಪಾದಕರು ಶಸ್ತ್ರಸಜ್ಜಿತವಾಗಿ ಬಂದಿದ್ದು, ಮನಬಂದಂತೆ ಗುಂಡು ಹಾರಿಸಿದ್ದಾರೆ.. ವೆಸ್ಟ್ ಬ್ಯಾಂಕ್‌ನ ಹೆಬ್ರಾನ್‌ನಿಂದ ಆಗಮಿಸಿದ್ದ ಭಯೋತ್ಪಾದಕರು ಈ ದಾಳಿ ಮಾಡಿದ್ದಾರೆ.. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ..
ಭದ್ರತಾ ಸಿಬ್ಬಂದಿ ಕೂಡಲೇ ಕಾರ್ಯಪ್ರವೃತ್ತರಾಗಿದ್ದು ಇಬ್ಬರೂ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.. ರೈಲ್ವೆ ನಿಲ್ದಾಣದಲ್ಲಿ ಟ್ರಾಫಿಕ್ ಕ್ರಾಸಿಂಗ್ ಬಳಿ ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ..