International

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ವಿದೇಶಾಂಗ ಸಚಿವಾಲಯ ಹೊಸ ಮಾರ್ಗಸೂಚಿ-ಗಡಿ ಪ್ರದೇಶಗಳಿಗೆ ತೆರಳದಂತೆ ಸೂಚನೆ

ಉಕ್ರೇನ್:‌  ಉಕ್ರೇನ್‌ನಲ್ಲಿರುವ ಭಾರತೀಯರಿಗೆ ವಿದೇಶಾಂಗ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಧಿಕಾರಿಗಳನ್ನು ಸಂಪರ್ಕಿಸದೆ  ಭಾರತೀಯರು ಗಡಿ ಪ್ರದೇಶಗಳಿಗೆ ಹೋಗದಂತೆ ಸೂಚನೆ ನೀಡಿದ್ದಾರೆ. ಉಕ್ರೇನ್‌ನ ಪಶ್ಚಿಮ ನಗರಗಳಲ್ಲಿ ಆಶ್ರಯ ಪಡೆಯಲು ಸಚಿವಾಲಯ ಸೂಚನೆಗಳನ್ನು ನೀಡಿದೆ. ಈಗಾಗಲೇ ಸಾವಿರಾರು ಭಾರತೀಯರು ಉಕ್ರೇನ್‌ನಲ್ಲಿ ಸಿಲುಕಿದ್ದಾರೆ. ಕೀವ್ ಮತ್ತು ಇತರ ಕೆಲವು ನಗರಗಳಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳು ಆಶ್ರಯ ಪಡೆದಿದ್ದಾರೆ. ಬಾಂಬ್ ಸ್ಫೋಟಗಳಿಂದಾಗಿ ಬಂಕರ್‌ಗಳಿಂದ ಆಚೆ ಬರಲು ಸಾಧ್ಯವಾಗದೆ ಅಲ್ಲಿಯೇ ರಕ್ಷಣೆ ಪಡೆಯುತ್ತಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಕೀವ್‌ನಿಂದ ರೊಮೇನಿಯಾಕ್ಕೆ ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ ಬಂದಿದ್ದಾರೆ. ಎರಡು ವಿಶೇಷ ಏರ್ ಇಂಡಿಯಾ ವಿಮಾನಗಳಲ್ಲಿ 470 ಜನರನ್ನು ಹೊತ್ತು ಭಾರತಕ್ಕೆ ಬರಲಿವೆ. ರೊಮೇನಿಯಾ ರಾಜಧಾನಿ ಬುಕಾರೆಸ್ಟ್‌ನಿಂದ ದೆಹಲಿ ಮತ್ತು ಮುಂಬೈಗೆ ವಿಮಾನಗಳು ಈಗಾಗಲೇ ಹೊರಟಿವೆ. ಫ್ಲೈಟ್ ಎಐ 1942 ಬೆಳಗ್ಗೆ 10.30ಕ್ಕೆ ದೆಹಲಿ ತಲುಪಲಿದೆ. ಇನ್ನೊಂದು AI 1944 ವಿಮಾನವು ಮಧ್ಯಾಹ್ನ ಮುಂಬೈಗೆ ಆಗಮಿಸುತ್ತದೆ.

 

Share Post