International

UKRAINE-RUSSIA WAR; ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ರಷ್ಯಾ ನೆರವು

ನವದೆಹಲಿ: ಖಾರ್ಕೀವ್‌, ಸುಮಿ ಸೇರಿದಂತೆ ವಿವಿಧ ನಗರಗಲ್ಲಿ ಸಿಲುಕಿರುವ ಭಾರತೀಯರು ಹಾಗೂ ಇತರೆ ವಿದೇಶೀಯರನ್ನು ರಕ್ಷಿಸಲು ರಷ್ಯಾ ಮುಂದೆ ಬಂದಿದೆ. ಇದಕ್ಕಾಗಿ ರಷ್ಯಾದ  ಬಸ್​ಗಳು ಕ್ರಾಸಿಂಗ್ ಪಾಯಿಂಟ್‌ಗಳಲ್ಲಿ ಸಿದ್ಧವಾಗಿವೆ .

ಈ ಬಗ್ಗೆ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಗೆ ರಷ್ಯಾ ಅಧಿಕೃತವಾಗಿ ತಿಳಿಸಿದೆ. ರಷ್ಯಾದ ಬೆಲ್ಗೊರೊಡ್ ಪ್ರದೇಶದಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತು ಇತರ ವಿದೇಶಿ ಪ್ರಜೆಗಳನ್ನು ಸ್ಥಳಾಂತರಿಸಲಾಗುತ್ತದೆ. ಇದಕ್ಕಾಗಿ ಖಾರ್ಕಿವ್ ಮತ್ತು ಸುಮಿಗೆ ಹೋಗಲು ಸಿದ್ಧವಾಗಿರುವ ‘ನೆಖೋಟೀವ್ಕಾ’ ಮತ್ತು ‘ಸುಡ್ಜಾ’ ಕ್ರಾಸಿಂಗ್ ಪಾಯಿಂಟ್‌ಗಳಲ್ಲಿ ಇಂದು ಬೆಳಿಗ್ಗೆ 6ರಿಂದ 130 ಹಲವು ಬಸ್‌ಗಳು ಕಾಯುತ್ತಿವೆ.

ಖಾರ್ಕೀವ್‌, ಕೀವ್‌ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ 2,000ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಸಿಲುಕಿದ್ದಾರೆ. ಎಲ್ಲರೂ ಊಟ, ನಿದ್ದೆ, ವಸತಿ ಇಲ್ಲದೆ ಒದ್ದಾಡುತ್ತಿದದಾರೆ. ಆದ್ರೆ ರಷ್ಯಾ ಇದೀಗ ಕದನ ವಿರಾಮ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವೂ ರಕ್ಷಣಾ ಕಾರ್ಯಾಚರಣೆಗಳನ್ನು ಚುರುಕುಗೊಳಿಸುತ್ತಿವೆ. ರಷ್ಯಾ ಗಡಿಯ ಮೂಲಕ ರಷ್ಯಾದ ದೇಶದ ಸಮೀಪದ ವಿಮಾನ ನಿಲ್ದಾಣಕ್ಕೆ ಭಾರತೀಯರನ್ನು ಅಲ್ಲಿಂದ ಸ್ವದೇಶಕ್ಕೆ ಕರೆತರುವ ಬಗ್ಗೆಯೂ ಪ್ರಯತ್ನಗಳು ತೀವ್ರಗೊಂಡಿವೆ.

Share Post