International

UKRAINE-RUSSIA WAR; ಭಾರತೀಯರನ್ನು ಕರೆತರಲು ಇದು ಸುಸಮಯ

ಕೀವ್‌; ಕೊನೆಗೂ ಹತ್ತು ದಿನಗಳ ನಂತರ ರಷ್ಯಾ ಉಕ್ರೇನ್‌ನಲ್ಲಿ ಕದನ ವಿರಾಮ ಘೋಷಣೆ ಮಾಡಿದೆ. ಇದು ತಾತ್ಕಾಲಿಕ ಕದನ ವಿರಾಮ ಎಂದು ಹೇಳಿದೆ. ಯುದ್ಧ ಪೀಡಿತ ಪ್ರದೇಶಗಳಲ್ಲಿ ನಾಗರಿಕರು ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಅವರೆಲ್ಲಾ ಸುರಕ್ಷಿತ ಪ್ರದೇಶಗಳಿಗೆ ತೆರಳಲು ಅನುವು ಮಾಡಿಕೊಡಲಾಗಿದೆ.

ಕೀವ್‌, ಖಾರ್ಕೀವ್‌ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಾವಿರಾರು ಭಾರತೀಯರಿದ್ದಾರೆ. ಅಲ್ಲಿ ಯುದ್ಧ ನಡೆಯುತ್ತಿದ್ದರಿಂದ ಅವರನ್ನು ಭಾರತಕ್ಕೆ ಕರೆತರುವುದಕ್ಕೆ ಕಷ್ಟವಾಗುತ್ತಿತ್ತು. ಆದ್ರೆ ಈಗ ಕದನ ವಿರಾಮ ಘೋಷಿಸಿರುವುದರಿಂದ ಯುದ್ಧದ ಭೀತಿಯಲ್ಲಿದ್ದ ಭಾರತೀಯರನ್ನು ಕರೆತರಲು ಅವಕಾಶ ಸಿಕ್ಕಂತಾಗಿದೆ. ಉಕ್ರೇನ್​ನ ವಿವಿಧ ಪ್ರದೇಶಗಳಲ್ಲಿ ಇನ್ನೂ 2000 ಭಾರತೀಯ ವಿದ್ಯಾರ್ಥಿಗಳು ಸಿಲುಕಿದ್ದಾರೆ ಎಂದು ಸರ್ಕಾರದ ಮೂಲಗಳು ಹೇಳಿವೆ. ಇದೀಗ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರವೂ ರಕ್ಷಣಾ ಕಾರ್ಯಾಚರಣೆಗಳನ್ನು ಚುರುಕುಗೊಳಿಸಲು ನಿರ್ಧರಿಸಿದ್ದು, ಅಕ್ಕಪಕ್ಕದ ದೇಶಗಳಲ್ಲಿರುವ ರಾಯಭಾರ ಕಚೇರಿ ಸಿಬ್ಬಂದಿಯನ್ನು ಉಕ್ರೇನ್​ನಲ್ಲಿರುವ ಭಾರತೀಯರ ಸ್ಥಳಾಂತರ ನಿಯೋಜಿಸಲು ಮುಂದಾಗಿದೆ. ರಷ್ಯಾ ಗಡಿಯ ಮೂಲಕ ರಷ್ಯಾದ ದೇಶದ ಸಮೀಪದ ವಿಮಾನ ನಿಲ್ದಾಣಕ್ಕೆ ಭಾರತೀಯರನ್ನು ಅಲ್ಲಿಂದ ಸ್ವದೇಶಕ್ಕೆ ಕರೆತರುವ ಬಗ್ಗೆಯೂ ಪ್ರಯತ್ನಗಳು ತೀವ್ರಗೊಂಡಿವೆ.

 

 

Share Post