International

ಸೆಪ್ಟೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಭಾರತ ಭೇಟಿ

ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರು ಸೆಪ್ಟೆಂಬರ್ 7 ರಿಂದ 10 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಅವರು ಭಾರತಕ್ಕೆ ಬರುತ್ತಿದ್ದಾರೆ ಎಂದು ಶ್ವೇತಭವನದ ಮೂಲಗಳು ತಿಳಿಸಿವೆ.

ರಷ್ಯಾ-ಉಕ್ರೇನ್ ಯುದ್ಧ ಸೇರಿದಂತೆ ಜಗತ್ತು ಎದುರಿಸುತ್ತಿರುವ ಹಲವು ಸವಾಲುಗಳ ಬಗ್ಗೆ ಈ ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ. ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರಿನ್ ಜೀನ್‌ಪಿಯರ್ ಅವರು ಭೇಟಿಯ ಕುರಿತು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಜಿ 20 ಶೃಂಗಸಭೆಯು ಜಗತ್ತು ಎದುರಿಸುತ್ತಿರುವ ಸವಾಲುಗಳನ್ನು ನಿಭಾಯಿಸಲು ಜಂಟಿ ಪ್ರಯತ್ನಗಳನ್ನು ಚರ್ಚಿಸುತ್ತದೆ. ಕ್ಲೀನ್ ಎನರ್ಜಿ, ಹವಾಮಾನ ಬದಲಾವಣೆಯ ವಿರುದ್ಧ ಹೋರಾಡುವುದು ಮತ್ತು ಉಕ್ರೇನ್‌ನಲ್ಲಿನ ಯುದ್ಧದ ಆರ್ಥಿಕ ಮತ್ತು ಸಾಮಾಜಿಕ ಪರಿಣಾಮಗಳನ್ನು ತಗ್ಗಿಸುವಂತಹ ವಿಷಯಗಳನ್ನು ಚರ್ಚಿಸಲಾಗುವುದು.

Share Post