OPERATION GANGA; ದೆಹಲಿಗೆ ಆಗಮಿಸಿದ 439 ವಿದ್ಯಾರ್ಥಿಗಳು
ನವದೆಹಲಿ: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಭಾರತಕ್ಕೆ ಕರೆತರುವ ಪ್ರಯತ್ನಗಳು ಮತ್ತಷ್ಟು ಚುರುಕು ಗೊಂಡಿವೆ. ಇವತ್ತೂ ಕೂಡಾ ಒಂದು ವಿಮಾನ ದೆಹಲಿ ತಲುಪಿದೆ. ಸುಮಾರು 439 ವಿದ್ಯಾರ್ಥಿಗಳು ದೆಹಲಿ ತಲುಪಿದ್ದಾರೆ.
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಇಂದು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಎಲ್ಲಾ ವಿದ್ಯಾರ್ಥಿಗಳನ್ನು ಅವರವರ ಊರುಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ.