ದೇಹದ ತೂಕ ಕಡಿಮೆ ಮಾಡಕೊಳ್ಳಲು ಗೋರಿಕಾಯಿ ರಾಮಬಾಣ
ಇತ್ತೀಚಿನ ದಿನಗಳಲ್ಲಿ ಅಧಿಕ ತೂಕದ ಸಮಸ್ಯೆ ಎಲ್ಲರನ್ನೂ ಕಾಡುತ್ತಿದೆ. ಅನೇಕ ಜನರು ತೂಕ ಇಳಿಸಿಕೊಳ್ಳಲು ಹಲವಾರು ಪ್ರಯತ್ನಗಳನ್ನು ಮಾಡುತ್ತಾರೆ. ಅಧಿಕ ತೂಕದಿಂದಾಗಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ತೂಕವನ್ನು ಕಡಿಮೆ ಮಾಡಲು ಮತ್ತು ಹೊಟ್ಟೆಯ ಕೊಬ್ಬನ್ನು ಇಳಿಸಲು ವಿವಿಧ ಆಹಾರಗಳನ್ನು ತಿನ್ನುವುದು, ಡಯೆಟ್ ಅಂತಹ ನಾನಾ ಪ್ರಯತ್ನಗಳನ್ನು ಮಾಡ್ತಾರೆ. ನಮ್ಮ ಆಹಾರದಲ್ಲಿ ಗೋರಿಕಾಯಿ ಬಳಕೆ ತೂಕ ಇಳಿಸಲು ನೆರವಾಗುತ್ತದೆ ಎನ್ನುತ್ತಾರೆ ಪೌಷ್ಟಿಕತಜ್ಞರು. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಅತ್ಯುತ್ತಮ ಆಹಾರ ಎಂದು ಶಿಫಾರಸು ಮಾಡಲಾಗಿದೆ.
ಗೋರಿಕಾಯಿ ವಿವಿಧ ರೀತಿಯ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಇವು ತೂಕವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ ಮನಸ್ಸನ್ನು ಶಾಂತವಾಗಿರಿಸಲು ಸಹಾಯ ಮಾಡುತ್ತದೆ. ಬೊಜ್ಜು ಇರುವವರು ಗೋರಿಕಾಯಿ ತಿನ್ನುವುದರಿಂದ ಬೊಜ್ಜಿನ ಸಮಸ್ಯೆ ಕಡಿಮೆಯಾಗುತ್ತದೆ. ಪ್ರೋಟೀನ್, ಖನಿಜ, ವಿಟಮಿನ್ ಮತ್ತು ಫೈಬರ್ ಅನ್ನು ಈ ತರಕಾರಿ ಹೊಂದಿರುತ್ತದೆ. ಹೃದಯ ಸಂಬಂಧಿ ಸಮಸ್ಯೆಗಳನ್ನು ತಡೆಯುತ್ತದೆ. ಮಧುಮೇಹದಿಂದ ಬಳಲುತ್ತಿರುವವರಿಗೆ ಗೋರಿಕಾಯಿ ಉತ್ತಮ ಆಹಾರವಾಗಿದೆ. ಇದು ರಕ್ತದಲ್ಲಿನ ಹಿಮೋಗ್ಲೋಬಿನ್ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲ್ಲದೇ ರಕ್ತ ಸಂಚಾರವೂ ಸರಾಗವಾಗುವಂತೆ ಮಾಡುತ್ತದೆ.
ಮಲಬದ್ಧತೆಯಿಂದ ಬಳಲುತ್ತಿರುವವರು ಗೋರಿಕಾಯಿ ಸೇವನೆಯಿಂದ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಜೀರ್ಣಕಾರಿ ಸಮಸ್ಯೆಗಳನ್ನು ತೊಲಗುತ್ತದೆ. ಇದರಲ್ಲಿರುವ ಕ್ಯಾಲ್ಸಿಯಂ ಮೂಳೆಗಳನ್ನು ಗಟ್ಟಿಗೊಳಿಸುತ್ತದೆ. ಸ್ನಾಯುಗಳನ್ನು ಬಲಪಡಿಸುತ್ತದೆ. ಗರ್ಭಿಣಿಯರು ಗೋರಿಕಾಯಿ ಸೇವಿಸಿದರೆ ಮಗುವಿನ ಆರೋಗ್ಯಕ್ಕೆ ಒಳ್ಳೆಯದು. ಗೋರಿಕಾಯಿಯಲ್ಲಿರುವ ಪೊಟ್ಯಾಶಿಯಂ ಮತ್ತು ನಾರಿನಂಶವು ದೇಹದಲ್ಲಿರುವ ಕೆಟ್ಟ ತ್ಯಾಜ್ಯವನ್ನು ಹೊರಹಾಕಲು ಸಹಾಯ ಮಾಡುತ್ತದೆ.
ಭ್ರೂಣದ ಬೆಳವಣಿಗೆಗೆ ಕೊಡುಗೆ ನೀಡುತ್ತದೆ. ಇದು ಆಂಟಿಆಕ್ಸಿಡೆಂಟ್‌ಗಳನ್ನು ಹೊಂದಿದ್ದು ರಾಡಿಕಲ್‌ಗಳ ವಿರುದ್ಧ ಹೋರಾಡುತ್ತದೆ ಮತ್ತು ಕ್ಯಾನ್ಸರ್ ವಿರುದ್ಧ ರಕ್ಷಿಸುತ್ತದೆ. ರಕ್ತದಲ್ಲಿ ಅಧಿಕ ಕೊಲೆಸ್ಟ್ರಾಲ್ ಇರುವವರಿಗೆ ಉತ್ತಮ ಆಹಾರ ಎಂದು ಪೌಷ್ಟಿಕತಜ್ಞರು ಶಿಫಾರಸು ಮಾಡುತ್ತಾರೆ. ಚರ್ಮದ ಕಾಯಿಲೆಗಳನ್ನು ತಡೆಗಟ್ಟಲು, ಸುಕ್ಕುಗಳು ಮತ್ತು ಕಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ.