BengaluruLifestyle

ರಾಜ್ಯದಲ್ಲಿ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಮುಟ್ಟಿನ ರಜೆ

ಬೆಂಗಳೂರು; ರಾಜ್ಯದಲ್ಲಿ ಖಾಸಗಿ ಹಾಗೂ ಸರ್ಕಾರಿ ವಲಯದಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡಲು ನೀತಿ ರೂಪಿಸಲಾಗುತ್ತಿದೆ.. ವರ್ಷಕ್ಕೆ 6 ದಿನ ವೇತನ ಸಹಿತ ಮುಟ್ಟಿನ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದ್ದು, ಇದನ್ನು ಜಾರಿಗೆ ತರಲು ಮುಂದಾಗಿದೆ ಎಂದು ತಿಳಿದುಬಂದಿದೆ.. ಮುಟ್ಟಿಗೆ ರಜೆ ನೀಡುವ ಸಂಬಂಧ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಇದಕ್ಕಾಗಿ ಸಮಿತಿಯೊಂದನ್ನು ರಚಿಸಲಾಗಿತ್ತು.. ಸಮಿತಿ ವರದಿ ನೀಡಿದ್ದು, ಸರ್ಕಾರ ಈ ಬಗ್ಗೆ ಶೀಘ್ರದಲ್ಲೇ ಘೋಷಣೆ ಮಾಡಲಿದೆ ಎಂದು ತಿಳಿದುಬಂದಿದೆ..
ಡಾ ಸಪ್ನಾ ಮುಖರ್ಜಿ ನೇತೃತ್ವದ ವರದಿ ತಯಾರಿಸಲು ಸಮಿತಿ ರಚನೆ ಮಾಡಲಾಗಿತ್ತು.. ಇದೀಗ ಸಮಿತ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ. ಸಂಬಂಧಪಟ್ಟ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಅನುಮೋದನೆಗಾಗಿ ಶಾಸಕಾಂಗದ ಮುಂದೆ ಪ್ರಸ್ತಾಪಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ತಿಳಿಸಿದ್ದಾರೆ.. ಮೊದಲಿಗೆ ಖಾಸಗಿ ಕಂಪನಿಗಳಲ್ಲಿ ಮುಟ್ಟಿನ ರಜೆ ಘೋಷಣೆ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.. ಅನಂತರ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಇಲಾಖೆಗಳಲ್ಲೂ ಇದನ್ನು ಜಾರಿಗೆ ತರಲು ಸರ್ಕಾರ ಚಿಂತನೆ ಮಾಡಿದೆ..
ಸುಪ್ರೀಂ ಕೋರ್ಟ್ ಆದೇಶದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಅನುಗುಣವಾಗಿ ಈ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. ಈ ಹಿಂದೆ ಬಿಹಾರ ಸರ್ಕಾರ 1992 ರಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಘೋಷಿಸಿತ್ತು. ಅನಂತರ ಉತ್ತರ ಪ್ರದೇಶ, ಕೇರಳ, ಮಹಾರಾಷ್ಟ್ರದಲ್ಲೂ ಮುಟ್ಟಿನ ರಜೆ ನೀಡಲಾಗುತ್ತಿದೆ..

Share Post