Lifestyle

ಅತಿ ಸಣ್ಣ ವಯಸ್ಸಿಗೆ ಹೆಣ್ಮಕ್ಕಳು ತಾಯಿಯಾಗುವುದು-ಅನಾರೋಗ್ಯಕ್ಕೆ ದಾರಿ ಮಾಡಿಕೊಟ್ಟಂತೆ

ವಯಸ್ಸಲ್ಲದ ವಯಸ್ಸಿನಲ್ಲಿ ಮದುವೆ ಮಾಡುವುದು(ಬಾಲ್ಯ ವಿವಾಹ) ಅವರ ಜೀವನ ನರಕ ಆಗುವುದು ಎರಡೂ ಒಂದೇ. ಮಕ್ಕಳನ್ನು ಹೆರುವ ವಯಸ್ಸಿಲ್ಲದಿದ್ರೂ ಮದುವೆ ಮಾಡಿ ಅವರ ಜೀವನವನನು ನರಕಕ್ಕೆ ತಳ್ಳುವ ಮುನ್ನ ಒಮ್ಮೆ ಯೋಚಿಸಿ. ಚಿಕ್ಕ ವಯಸ್ಸಿನಲ್ಲಿ ಮದುವೆ ಆಗಿರುವ ಅನೇಕ ಹೆಣ್ಣುಮಕ್ಕಳು ಗರ್ಭ ಧರಿಸುತ್ತಿದ್ದಾರೆ. ಈ ವಿಷಯದ ಬಗ್ಗೆ ಈಗಾಗಲೇ ದೇಶಾದ್ಯಂತ ತೀವ್ರ ಕಳವಳ ವ್ಯಕ್ತವಾಗಿದೆ. ಹೆಣ್ಣುಮಕ್ಕಳಿಗೆ ಮತ್ತು ಅವರ ಪೋಷಕರಿಗೆ ಸಂಪೂರ್ಣ ತಿಳುವಳಿಕೆ ಇಲ್ಲದಿರುವುದೇ ಇದಕ್ಕೆ ಮುಖ್ಯ ಕಾರಣ. ಸಂತಾನೋತ್ಪತ್ತಿ ಮತ್ತು ಲೈಂಗಿಕ ಆರೋಗ್ಯದ ಬಗ್ಗೆ ಸರಿಯಾದ ತಿಳುವಳಿಕೆಯ ಕೊರತೆಯಿಂದಾಗಿ ಅನೇಕ ಹುಡುಗಿಯರು ಚಿಕ್ಕ ವಯಸ್ಸಿನಲ್ಲಿಯೇ ಗರ್ಭ ಧರಿಸುತ್ತಾರೆ.

ಇಂತಹ ವಿಷಮ ಪರಿಸ್ಥಿತಿ ಹೆಣ್ಣುಮಕ್ಕಳಿಗೆ ಜೀವಮಾನವಿಡೀ ದೈಹಿಕ, ಮಾನಸಿಕ ಮತ್ತು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಜೊತೆಗೆ ಚಿಕ್ಕ ವಯಸ್ಸಿಗೆ ಗರ್ಭವತಿಯಾಗುವುದರಿಂದ ಹುಟ್ಟುವ ಮಕ್ಕಳಲ್ಲಿ ಅನೇಕ ಕಾಯಿಲೆಗಳು ಉದ್ಭವಿಸುತ್ತವೆ. ಚಿಕ್ಕ ವಯಸ್ಸಿನಲ್ಲಿ ಗರ್ಭಿಣಿಯಾಗುವ ಹುಡುಗಿಯರು  ಅನಿಮಿಯಾಗೆ ಒಳಗಾಗುತ್ತಾರೆ. ಇದರ ಜೊತೆಗೆ ಅಧಿಕ ರಕ್ತದೊತ್ತಡ, ಅವಧಿಪೂರ್ವ ಮಕ್ಕಳ ಜನನ, ಒತ್ತಡ ಮತ್ತು ಮಾನಸಿಕ ಕಿರುಕುಳದಂತಹ ಸಮಸ್ಯೆಗಳು ಉದ್ಭವಿಸಬಹುದು.

ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಲ್ಲಿ  ಜನಿಸಿದ ಶಿಶುಗಳು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕಡಿಮೆ ತೂಕ, ಉಸಿರಾಟದ ತೊಂದರೆ, ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆ ಶಿಶುಗಳಲ್ಲಿ ಕಂಡುಬರುತ್ತದೆ.  . ಕೆಲವೊಮ್ಮೆ ಹುಟ್ಟಿದ ಕೆಲವೇ ಗಂಟೆಗಳಲ್ಲಿ ಮಕ್ಕಳು ಸಾವನ್ನಪ್ಪುತ್ತವೆ.  ಅದಕ್ಕಾಗಿಯೇ ಪೋಷಕರು ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ಮದುವೆ ಮಾಡುವ ಮುನ್ನ ಯೋಚನೆ ಮಾಡಬೇಕು.

Share Post