Lifestyle

ದ.ಆಫ್ರಿಕಾದಲ್ಲಿ ಹೊಸ ವರ್ಷ ಆಚರಿಸಿದ ವಿರುಷ್ಕಾ ದಂಪತಿ

ಸೆಂಚೂರಿಯನ್‌ : ವಿರಾಟ್‌ ಕೊಹ್ಲಿ ಮತ್ತು ಅನುಷ್ಕಾ ದಂಪತಿ ದ.ಆಫ್ರಿಕಾದಲ್ಲಿ ಹೊಸ ವರ್ಷ ಆಚರಣೆ ಮಾಡಿದ್ದಾರೆ. ರೆಸಾರ್ಟ್‌ವೊಂದರಲ್ಲಿ ಹೊಸ ವರ್ಷದ ಈವೆಂಟ್‌ ಆಯೋಜಿಸಿ, ತಮ್ಮ ಸಿಬ್ಬಂದಿಯೊಂದಿಗೆ ಕೇಕ್‌ ಕತ್ತರಿಸುವ ಮೂಲಕ ವಿರುಷ್ಕಾ ದಂಪತಿ 2022ಅನ್ನು ಸ್ವಾಗತಿಸಿದರು.

ಅನುಷ್ಕಾ ಸಂಭ್ರಮಾಚರಣೆಯ ಫೋಟೋ ಹಾಗೂ ವೀಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕೇಕ್ ಕಟ್ ಮಾಡಿದ ನಂತರ ರೇಸಾರ್ಟ್ ನಲ್ಲಿರುವ ಸಿಬ್ಬಂದಿ ನೃತ್ಯ ಮಾಡುವ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಸಿಬ್ಬಂದಿಯೊಂದಿಗೆ ಕೊಹ್ಲಿ ಹೊಸ ವರ್ಷ ಸಂಭ್ರಮಾಚರಣೆ ಮಾಡುತ್ತಿರುವ ವೀಡಿಯೋವನ್ನು ಅನುಷ್ಕಾ ಶರ್ಮಾ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Share Post