ಟಿಆರ್ ಎಸ್ ಈಗ ಭಾರತ್ ರಾಷ್ಟ್ರ ಸಮಿತಿ
ಹೈದರಾಬಾದ್(ತೆಲಂಗಾಣ):ರಾಷ್ಟ್ರ ರಾಜಕಾರಣ ಮೇಲೆ ಕಣ್ಣಿಟ್ಟಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ತಮ್ಮ ಹೊಸ ರಾಷ್ಟ್ರೀಯ ಪಕ್ಷದ ಹೆಸರು ಘೋಷಿಸಿದರು. ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ಎಂದಿದ್ದ ಅವರ ಪಕ್ಷಕ್ಕೆ ಭಾರತ್ ರಾಷ್ಟ್ರ ಸಮಿತಿ(ಬಿಆರ್ಎಸ್) ಎಂದು ಮರುನಾಮಕರಣ ಮಾಡಿದ್ದಾರೆ.
ಇಂದು ಮಧ್ಯಾಹ್ನ ನಡೆಯುವ ಸಭೆಯಲ್ಲಿ ಪಕ್ಷದ ಹೆಸರನ್ನು ಪ್ರಸ್ತಾಪಿಸಿ ಅನುಮೋದನೆ ಪಡೆಯಲಿದ್ದಾರೆ. ಸಭೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ತಮಿಳುನಾಡು ವಿಸಿಕೆ ಪಕ್ಷದ ಅಧ್ಯಕ್ಷ, ಸಂಸದ ತಿರುಮಾವಲವನ್ ಮತ್ತಿತರರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ