National

ರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆ

ನವದೆಹಲಿ; ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಯಶವಂತ್ ಸಿನ್ಹಾ ಅವರ ವಿರುದ್ಧ ಭರ್ಜರಿ ಜಯ ಗಳಿಸಿದ್ದಾರೆ.
ಎಲ್ಲ ಮತಗಳ ಎಣಿಕೆ ನಂತರ ಅವರ ಗೆಲುವಿನ ಬಗ್ಗೆ ಅಧಿಕೃತ ಪ್ರಕಟಣೆಯನ್ನು ನಿರೀಕ್ಷಿಸಲಾಗಿದೆ. ಆದರೆ, ಅವರು ಈಗಾಗಲೇ 5,77,777 ಮತಗಳನ್ನು ಪಡೆದಿದ್ದಾರೆ. ಇದು ಜುಲೈ 18 ರಂದು ನಡೆದ ಚುನಾವಣೆಯಲ್ಲಿ ಚಲಾವಣೆಯಾದ ಒಟ್ಟು ಮಾನ್ಯವಾದ ಮತಗಳ ಅರ್ಧಕ್ಕಿಂತ ಹೆಚ್ಚು.

ಮುರ್ಮು ಅವರು ಈಗಾಗಲೇ ಒಟ್ಟು ಮಾನ್ಯ ಮತಗಳ ಶೇಕಡಾ 53 ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾಧಿಕಾರಿ ಪಿ ಸಿ ಮೋದಿ ಘೋಷಿಸಿದರು. 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತಪತ್ರಗಳ ಎಣಿಕೆ ಇನ್ನೂ ಮಾಡಲಾಗುತ್ತಿದೆ. ಇಲ್ಲಿಯವರೆಗಿನ ಪ್ರತಿ ಸುತ್ತಿನ ಮತ ಎಣಿಕೆಯಲ್ಲಿ ಅವರು ಮೂರನೇ ಎರಡರಷ್ಟು ಮತಗಳನ್ನು ಪಡೆದಿದ್ದಾರೆ. ಅವರ ಪರವಾಗಿ ವಿರೋಧ ಪಕ್ಷಗಳ 17 ಸಂಸದರು ಅಡ್ಡ ಮತದಾನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುರ್ಮು ಆಯ್ಕೆ ಖಚಿತವಾಗುತ್ತಿದ್ದಂತೆ ಅವರ ಸ್ವಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಗ್ರಾಮಸ್ಥರು ಲಡ್ಡು ಹಂಚಿ ಸಂಭ್ರಮಿಸುತ್ತಿದ್ದಾರೆ.

Share Post