EconomyNational

ಇಂದು ಸಂಸತ್ತಿನಲ್ಲಿ ಮಧ್ಯಂತರ ಬಜೆಟ್ ಮಂಡನೆ

ನವದೆಹಲಿ; ಇಂದು ಸಂಸತ್ತಿನಲ್ಲಿ ಮಧ್ಯಂತರ ಬಜೆಟ್ ಮಂಡನೆಯಾಗಲಿದೆ. ನಿರ್ಮಲಾ ಸೀತಾರಾಮ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಬಜೆಟ್ ಭಾಷಣ ಶುರು ಮಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಯವರೆಗೂ ಬಜೆಟ್ ಭಾಷಣ ಮುಂದುವರೆಯುವ ಸಾಧ್ಯತೆ ಇದೆ.

 

   ಮೋದಿ ನೇತೃತ್ವದ ಎನ್ಡಿಎ ೨ ಸರ್ಕಾರದ ಅಂತಿಮ ಬಜೆಟ್ ಇದಾಗಿದೆ. ಇನ್ನು ಎರಡು ತಿಂಗಳಲ್ಲಿ ಲೋಕಸಭಾ ಚುನಾವಣೆ ಎದುರಾಗುವುದರಿಂದ ಇದು ಮಧ್ಯಂತರ ಬಜೆಟ್ ಆಗಿದೆ. ಚುನಾವಣೆ ನಂತರ ಬರುವ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಲಿದೆ. ಹೀಗಾಗಿ ಈ ಬಜೆಟ್ ಗೆ ಹೆಚ್ಚಿನ ಮಹತ್ವ ಇರುವುದಿಲ್ಲ.

 

Share Post