ಗನ್ ಮಿಸ್‌ಫೈರ್; ಮದುವೆ ನಿಶ್ಚಯವಾಗಿದ್ದ ಪೊಲೀಸ್ ಅಧಿಕಾರಿ ಸಾವು
ತೆಲಂಗಾಣ: ಗನ್ ಮಿಸ್‌ಫೈರ್ ಆಗಿ ಹೆಡ್‌ಕಾನ್ಸ್‌ಟೇಬಲ್ ಮೃತಪಟ್ಟಿರುವ ಘಟನೆ ತೆಲಂಗಾಣದ ಭದ್ರಾದ್ರಿ ಕೊತ್ತಗುಡೆಂ ಜಿಲ್ಲೆಯ ಕಚನಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಸ್ತ್ರಾಸ್ತ್ರಗಳನ್ನು ಪರಿಶೀಲಿಸುತ್ತಿರುವಾಗ ಈ ಘಟನೆ ನಡೆದಿದೆ ಎಂದು ಭದ್ರಾದ್ರಿ ಪೊಲೀಸರು ತಿಳಿಸಿದ್ದಾರೆ.
ವರಂಗಲ್ ಜಿಲ್ಲೆಯ ಗವಿಚಾರ್ಲ ನಿವಾಸಿ ಸಂತೋಷ್ ಮೃತಪಟ್ಟ ಹೆಡ್‌ಕಾನ್ಸ್‌ಟೇಬಲ್ ಆಗಿದ್ದು, ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೂರು ದಿನಗಳ ಹಿಂದೆಯಷ್ಟೇ ಸಂತೋಷ್ ವಿವಾಹಕ್ಕೆ ಹುಡುಗಿಯನ್ನು ಆಯ್ಕೆ ಮಾಡಲಾಗಿತ್ತು. ಶೀಘ್ರದಲ್ಲೇ ವಿವಾಹ ನೆರವೇರಿಸಲು ಕುಟುಂಬ ತೀರ್ಮಾನಿಸಿತ್ತು ಎಂದು ತಿಳಿದುಬಂದಿದೆ.