NationalPolitics

ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಪ್ರಮಾನವಚನ ಸ್ವೀಕರಿಸಿದ ಚಂಪೈ ಸೊರೇನ್‌

ರಾಂಚಿ; ಹೇಮಂತ್‌ ಸೊರೇನ್‌ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನವನ್ನು ಚಂಪೈ ಸೊರೇನ್‌ ಅಲಂಕರಿಸಿದ್ದಾರೆ. ಇಂದು ಚಂಪೈ ಸೊರೇನ್‌ ಅವರು ಜಾರ್ಖಂಡ್‌ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಂಚಿಯ ರಾಜಭವನದ ದರ್ಬಾರ್ ಹಾಲ್‌ ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ ಅವರು ಚಂಪೈ ಸೊರೇನ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.

ಹೇಮಂತ್ ಸೊರೆನ್ ಅವರು ಭೂಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ಎರಡು ದಿನಗಳ ಹಿಂದೆ ಅವರನ್ನು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅನಂತರ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷ ಶಾಸಕಾಂಗ ಪಕ್ಷದ ನಾಯಕನಾಗಿ ಹಿರಿಯ ನಾಯಕ ಚಂಪೈ ಸೊರೇನ್‌ ಅವರನ್ನು ಆಯ್ಕೆ ಮಾಡಿತ್ತು. ಚಂಪೈ ಸೊರೇನ್‌ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅನುಮತಿ ಕೋರಿದ್ದರು.

Share Post