National

ಬಾಲಿವುಡ್‌ ನಟ ಜಾನ್‌ ಅಬ್ರಹಾಂಗೆ ಕೊರೋನಾ

ದೆಹಲಿ: ದೇಶದಲ್ಲಿ ಕೊರೋನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಇನ್ನು ಕೆಲವು ಕಡೆ ಸರ್ಕಾರ ಲಾಕ್‌ ಡೌನ್‌ ಕೂಡ ಜಾರಿ ಮಾಡಿದ್ದಾರೆ. ಮೊನ್ನೆ ತಾನೇ ಸೌರವ್‌ ಗಂಗೋಲಿ ಮತ್ತು ತಮಿಳು ಹಾಸ್ಯನಟ ವಡಿವೇಲು ಕೊರೋನಾ ಸೋಂಕು ದೃಢಪಟ್ಟಿತ್ತು. ಆದರೆ ಇದೀಗ ಬಾಲಿವುಡ್‌ ನಟ ಜಾನ್‌ ಅಬ್ರಹಾಂಗೆ ಕೊರೋನಾ ಸೋಂಕು ಪತ್ತೆಯಾಗಿರುವುದು ತಿಳಿದುಬಂದಿದೆ. ಜೊತೆಗೆ ಅವರ ಪತ್ನಿ ಪ್ರಿಯಾ ಕೂಡ ಕೊರೋನಾ ಸೋಂಕು ದೃಢಪಟ್ಟಿದೆ. ಸದ್ಯ ಅವರಿಬ್ಬರು ಹೋಂ ಕ್ವಾರಂಟೈನ್‌ ನಲ್ಲಿದ್ದಾರೆ
ಈ ಕುರಿತು ಜಾನ್‌ ಅಬ್ರಹಾಂ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಕಳೆದ ಹಿಂದೆ ಒಬ್ಬ ವ್ಯಕ್ತಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರನ್ನು ನಾನು ಭೇಟಿ ಮಾಡಿದ್ದೆ,ಇದ್ದರಿಂದ ನಮಗೂ ಕೂಡ  ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.  ಪ್ರತಿಯೊಬ್ಬರು ಮಾಸ್ಕ್‌ ಧರಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.

Share Post