ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ರಾಜನಾಥ್ ಸಿಂಗ್ ಸಭೆ
ನವದೆಹಲಿ: ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ದುರಂತ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ. ಅಧಿಕಾರಿಗಳ ಜೊತೆ ಘಟನೆಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.
ರಕ್ಷಣಾ ಇಲಾಖೆ ಅಧಿಕಾರಿಗಳ ಸಭೆ ಬಳಿಕ ರಾಜನಾಥ್ ಸಿಂಗ್ ಅವರು ಸಂಸತ್ತಿಗೆ ಭೇಟಿ ನೀಡಲಿದ್ದಾರೆ. ಸಂಸತ್ತಿನಲ್ಲಿ ದುರಂತದ ಬಗ್ಗೆ ಅಧಿಕೃತ ಮಾಹಿತಿ ನೀಡಲಿದ್ದಾರೆ.