National

ಲುಧಿಯಾನದ ಜಿಲ್ಲಾ ಕೋರ್ಟ್‌ ನಲ್ಲಿ ಸ್ಫೋಟ ಪ್ರಕರಣ: ಆರೋಪಿ ಗುರುತು ಪತ್ತೆ

ದೆಹಲಿ: ಲುಧಿಯಾನದ ಜಿಲ್ಲಾ ಕೋರ್ಟ್‌ ಆವರಣದಲ್ಲಿ ಸಂಭವಿಸಿದ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪತ್ತೆ ಹಚ್ಚಿದ್ದು, ತನಿಖಾಧಿಕಾರಿಗಳು ಮತ್ತಷ್ಟು ತನಿಖೆ ಚುರುಕುಗೊಳಿಸಿದ್ದಾರೆ.
ಈ ಸ್ಫೋಟದಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ಆ ಮೃತದೇಹ ಆತ್ಮಾಹುತಿ ಬಾಂಬರ್‌ನದ್ದು ಎಂದು ನಂಬಲಾಗಿದೆ. ಆತ್ಮಾಹುತಿ ಬಾಂಬರ್ ಮಾಜಿ ಪೊಲೀಸ್ ಸಿಬ್ಬಂದಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೂಲಗಳ ಪ್ರಕಾರ, ಸ್ಫೋಟದಲ್ಲಿ ಸಾವನ್ನಪ್ಪಿದ ವ್ಯಕ್ತಿ ಮಾಜಿ ಪೊಲೀಸ್ ಸಿಬ್ಬಂದಿ ಗಗನ್‌ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಖನ್ನಾದಲ್ಲಿನ ಸದರ್ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿದ್ದ ಸಿಂಗ್​ನನ್ನು 2019 ರಲ್ಲಿ ಸೇವೆಯಿಂದ ವಜಾಗೊಳಿಸಲಾಯಿತು. 785 ಗ್ರಾಂ ಹೆರಾಯಿನ್‌ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಂತರ ಎರಡು ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದ.

ನಂತರ ಗಗನ್‌ದೀಪ್ ಸಿಂಗ್​ನನ್ನು ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಲಾಯಿತ್ತು.ಪಂಜಾಬ್ ಪೊಲೀಸರು ಮತ್ತು ಎನ್‌ಐಎ ತಂಡ ಆರೋಪಿ ಗಗನ್‌ದೀಪ್ ನಿವಾಸದ ಮೇಲೆ ನಿನ್ನೆ ತಡರಾತ್ರಿ ದಾಳಿ ನಡೆಸಿತ್ತು. ಈ ವೇಳೆ ಪೊಲೀಸರ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಸಾಕ್ಷಿಧಾರದ ಫೋಟೋಗಳು ಸಿಕ್ಕಿವೆ. ಗಗನ್‌ದೀಪ್‌ಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Share Post