National

ವೀರೇಂದ್ರ ಹೆಗ್ಗಡೆ ರಾಜ್ಯಸಭೆಗೆ ನಾಮನಿರ್ದೇಶನ

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ , ಕೇರಳದ ಮಾಜಿ ಅಥ್ಲೀಟ್‌ ಪಿಟಿ ಉಷಾ, ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್‌ , ತಮಿಳುನಾಡಿನ ಇಳಯರಾಜ  ಅವರನ್ನು ರಾಜ್ಯಸಭೆಗೆ  ನಾಮನಿರ್ದೇಶನ ಮಾಡಲಾಗಿದೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿ ಶುಭ ಕೋರಿದ್ದಾರೆ. “ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶವಿದೆ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

Share Post