ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷರಾಗ್ತಾರಾ..?; ವಿಪಕ್ಷ ನಾಯಕನ ಕಥೆ ಏನು..?
ನವದೆಹಲಿ; ಸಿ.ಟಿ.ರವಿಯವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆದ್ರೆ ಎರಡು ದಿನದ ಹಿಂದೆ ಅವರನ್ನು ಆ ಹುದ್ದೆಯಿಂದ ಬಿಡುಗಡೆ ಮಾಡಲಾಗಿತ್ತು. ಇದೀಗ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ದೆಹಲಿಯಲ್ಲಿ ಚರ್ಚೆಗಳು ನಡೆಯುತ್ತಿವೆ. ಸಾಧ್ಯವಾದರೆ ಇವತ್ತು ಅಥವಾ ನಾಳೆ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕದ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕೂಡಾ ಈ ನಿಟ್ಟಿನಲ್ಲಿ ಮುಂದೆ ಸಾಗುತ್ತಿದೆ. ರಾಜ್ಯದ ಮಟ್ಟಿಗೆ ಬಿಜೆಪಿ ಪ್ರತಿಷ್ಠೆಯಾಗಿದೆ. ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಉಳಿಸಿಕೊಳ್ಳಲು ಬಿಜೆಪಿ ಮೆಗಾ ಪ್ಲ್ಯಾನ್ ಮಾಡುತ್ತಿದೆ. ಇದರ ಭಾಗವಾಗಿ ರಾಜ್ಯಾಧ್ಯಕ್ಷ ಹುದ್ದೆಗೆ ಸಿ.ಟಿ.ರವಿಯನ್ನು ನೇಮಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇನ್ನು ವಿಪಕ್ಷ ನಾಯಕ ಸ್ಥಾನಕ್ಕೆ ಇನ್ನೂ ಯಾರನ್ನೂ ಆಯ್ಕೆ ಮಾಡಿಲ್ಲ. ಯತ್ನಾಳ್ ಹೆಸರು ಚಾಲ್ತಿಯಲ್ಲಿದೆಯಾದರೂ, ಅವರನ್ನು ಆಯ್ಕೆ ಮಾಡೋದು ಬಹುತೇಕ ಕಷ್ಟ ಎಂದೇ ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರನ್ನು ಈಗಲೇ ಆಯ್ಕೆ ಮಾಡೋದು ಅನುಮಾನ ಎಂದೇ ಹೇಳಲಾಗುತ್ತಿದೆ. ಜೆಡಿಎಸ್ ಜೊತೆ ಹೊಂದಾಣಿ ಮಾಡಿಕೊಂಡರೆ, ವಿಪಕ್ಷ ನಾಯಕನನ್ನಾಗಿ ಕುಮಾರಸ್ವಾಮಿಯವರನ್ನು ಆಯ್ಕೆ ಮಾಡಿದರೆ ಬಿಜೆಪಿ ಏನು ಅನುಕೂಲ ಇದೆ ಎಂಬುದರ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.