ಮಹಿಳಾ ಸ್ವಸಹಾಯ ಸಂಘಗಳಿಗೆ 1000 ಕೋಟಿ ರೂಪಾಯಿ ರಿಲೀಸ್
ಪ್ರಯಾಗ್ ರಾಜ್: 16 ಲಕ್ಷ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಕೇಂದ್ರ ಸರ್ಕಾರದಿಂದ ಸ್ವಸಹಾಯ ಸಂಘಗಳ ಬ್ಯಾಂಕ್ ಖಾತೆಗಳಿಗೆ 1,000 ಕೋಟಿ ರೂಪಾಯಿ ವರ್ಗಾವಣೆ ಮಾಡಿಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಪ್ರಯಾಗ್ ರಾಜ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಹಣವನ್ನು ಬಿಡುಗಡೆ ಮಾಡಲಾಗಿದೆ.
ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ನೆರವು ನೀಡಲಾಗಿದೆ. ಮಹಿಳೆಯರಿಗೆ, ಅದರಲ್ಲೂ ವಿಶೇಷವಾಗಿ ಬಡವರಿಗೆ ಅಗತ್ಯ ಕೌಶಲ್ಯ, ಪ್ರೋತ್ಸಾಹ ಮತ್ತು ಸಂಪನ್ಮೂಲಗಳನ್ನು ಒದಗಿಸುವ ಸಲುವಾಗಿ ಈ ನೆರವು ಒದಗಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 2 ಲಕ್ಷಕ್ಕೂ ಅಧಿಕ ಮಹಿಳೆಯರು ಭಾಗವಹಿಸಿದ್ದರು. ಇದೇ ವೇಳೆ ಉತ್ತರ ಪ್ರದೇಶ ಸರ್ಕಾರದ ಮುಖ್ಯಮಂತ್ರಿ ಕನ್ಯಾ ಸುಮಂಗಲಾ ಯೋಜನೆಯಡಿ 1 ಲಕ್ಷ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ 20 ಕೋಟಿ ರೂಪಾಯಿಯನ್ನು ಮೋದಿ ಬಿಡುಗಡೆ ಮಾಡಿದರು. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ 15,000 ಸಿಗಲಿದೆ.