National

ಇಸ್ರೇಲ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ಬಂದಿಳಿಸಿದ 230 ಭಾರತೀಯರು

ನವದೆಹಲಿ; ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ ನಡುವೆ ಯುದ್ಧ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇಸ್ರೇಲ್‌ನಲ್ಲಿದ್ದ ಸಾವಿರಾರು ಭಾರತೀಯರು ಸಂಕಷ್ಟದಲ್ಲಿದ್ದರು. ಅದರಲ್ಲಿ ಹಲವರನ್ನು ಸುರಕ್ಷಿತವಾಗಿ  ಭಾರತಕ್ಕೆ ಕರೆತರಲಾಗಿದೆ. ಆಪರೇಷನ್ ಅಜಯ್ ಕಾರ್ಯಾಚರಣೆ ಶುರು ಮಾಡಲಾಗಿದ್ದು, ಭಾರತೀಯರನ್ನು ಹೊತ್ತ ಮೊದಲ ವಿಮಾನ ದೆಹಲಿ ತಲುಪಿದೆ.

ಸುಮಾರು 230 ಮಂದಿ ಭಾರತೀಯರು ಇಸ್ರೇಲ್‌ನಿಂದ ದೆಹಲಿಗೆ ಸುರಕ್ಷಿತವಾಗಿ ಬಂದಿಳಿದಿದ್ದಾರೆ.  ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಇಸ್ರೇಲ್‌ನಿಂದ ಭಾರತಕ್ಕೆ ಬಂದಿಳಿಸಿದ ಭಾರತೀಯರನ್ನು ಸ್ವಾಗತಿಸಿದ್ದಾರೆ. ಭಾರತಕ್ಕೆ ವಾಪಾಸ್ಸಾದ 230 ಮಂದಿಯಲ್ಲಿ ಐವರು ಕನ್ನಡಿಗರು ಕೂಡಾ ಇದ್ದಾರೆ.

ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು ಕನ್ನಡಿಗರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಇದೇ ವೇಳೆ ದೆಹಲಿಯಿಂದ ಕರ್ನಾಟಕಕ್ಕೆ ತೆರಳಲು ಸಾರಿಗೆ ವೆಚ್ಚದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Share Post