National

ಖತುಶ್ಯಾಮ್‌ಜಿ ದೇವಸ್ಥಾನದಲ್ಲಿ ಕಾಲ್ತುಳಿ; ಮೂವರು ಮಹಿಳೆಯರ ಸಾವು

ಜೈಪುರ; ರಾಜಸ್ಥಾನದ ಸಿಕಾರ್‌ ಪಟ್ಟಣದ ದೇವಾಲಯವೊಂದರಲ್ಲಿ ಇಂದು ಬೆಳಗ್ಗೆ ಕಾಲ್ತುಳಿತದ ವೇಳೆ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಏಕಾದಶಿ ಹಿನ್ನೆಲೆಯಲ್ಲಿ ಇಲ್ಲಿನ ಪ್ರಸಿದ್ಧ ಖತುಶ್ಯಾಮ್‌ಜಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಇದ್ದ ಕಾರಣ ಸಾವಿರಾರು ಭಕ್ತರು ಸೇರಿದ್ದರು. ಈ ವೇಳೆ ಕಾಲ್ತುಳಿತ ವಾಗಿದೆ.

ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಸ್ಥಾನದ ಸಿಕಾರ್ ಜಿಲ್ಲೆಯ ಖತುಶ್ಯಾಮ್‌ಜಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ಭಾರೀ ಪ್ರಮಾಣದಲ್ಲಿ ಭಕ್ತರು ಸೇರಿದ್ದರು. ಬೆಳಗ್ಗೆ 4 ಗಂಟೆಗೆ ದೇವರಿಗೆ ಆರತಿ ಮಾಡಲು ಬಾಗಿಲು ಹಾಕಿದಾಗ ತಳ್ಳಾಟ ಉಂಟಾಗಿದೆ. ಕಾಲ್ತುಳಿತದಲ್ಲಿ ಸಿಲುಕಿ ಮೂವರು ಮಹಿಳೆಯರು ಅಸುನೀಗಿದ್ದಾರೆ. ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share Post