National

ಜಮ್ಮು-ಕಾಶ್ಮೀರದಲ್ಲಿ ಕಂಪಿಸಿದ ಭೂಮಿ; 4.7ತೀವ್ರತೆ ದಾಖಲು

ಶ್ರೀನಗರ; ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಮಧ್ಯಾಹ್ನ ಭೂಮಿ ಕಂಪಿಸಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಸಂಭವಿಸಿದ ಭೂಕಂಪನದ ಕೇಂದ್ರಬಿಂದು ತಜಕಿಸ್ತಾನ್ ಗಡಿ ಪ್ರದೇಶದಲ್ಲಿ ಪತ್ತೆಯಾಗಿದೆ. ರಿಕ್ಟರ್ ಮಾಪಕದಲ್ಲಿ 4.7ರಷ್ಟು ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ-ಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಮಿಯ 202 ಕಿಮೀ ಆಳದಲ್ಲಿ ಅಕ್ಷಾಂಶ 36.52 ಡಿಗ್ರಿ ಉತ್ತರ ಮತ್ತು ರೇಖಾಂಶ 71.18 ಡಿಗ್ರಿ ಪೂರ್ವದಲ್ಲಿ ಕಂಪನ ಸಂಭವಿಸಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Share Post