National

44 ಮಂದಿ ನಕ್ಸಲರು ಛತ್ತೀಸಗಡದಲ್ಲಿ ಶರಣು

ಸುಕ್ಮಾ : ಛತ್ತೀಸಗಡದ ಸುಕ್ಮಾ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಕ್ರಿಯರಾಗಿದ್ದ ೪೪ ಮಂದಿ ನಕ್ಸಲರು ಶರಣಾಗಿದ್ದಾರೆ. 44 ಮಂದಿಯಲ್ಲಿ 9 ಮಂದಿ ಮಹಿಳೆಯರಾಗಿದ್ದಾರೆ.

ಕೆಳ ಹಂತದ ಕೇಡರ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಇವರು ಇಲ್ಲಿನ ಚಿಂತಾಲ್‌ನರ್‌, ಕಿಸ್ಟಾರಾಮ್‌ ಮತ್ತು ಬೇಜಿ ಪ್ರದೇಶಗಳಲ್ಲಿ ಕಾರ್ಯಾಚರಣೆ ಮಾಡುತ್ತಿದ್ದರು ಎಂದು ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಸುನಿಲ್‌ ಶರ್ಮ ತಿಳಿಸಿದ್ದಾರೆ.

ಶರಣಾದ ನಕ್ಸಲರನ್ನು ಸುಕ್ಮಾ ಜಿಲ್ಲೆಯ ಕರಿಗುಂಡಮ್ ಹಳ್ಳಿಯಲ್ಲಿ ತಾತ್ಕಾಲಿಕವಾಗಿ ನಿರ್ಮಾಣ ಮಾಡಿರುವ ಪೊಲೀಸ್‌ ಕ್ಯಾಂಪ್‌ ನಲ್ಲಿ ಬೀಡು ಬಿಟ್ಟಿದ್ದಾರೆ. ಅವರಿಗೆ ಆಹಾರ ವಸತಿ ಸೌಕರ್ಯ ಕಲ್ಪಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Share Post