National

ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ ಹಿನ್ನೆಲೆ; ಶೇ.50 ಸಿಬ್ಬಂದಿಗೆ ವರ್ಕ್‌ಫ್ರಂ ಹೋಮ್‌

ನವದೆಹಲಿ; ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದೆ. ಗಾಳಿಯ ಗುಣಮಟ್ಟ ಹದಗೆಟ್ಟಿದ್ದರಿಂದ ಶೇ.50 ರಷ್ಟು ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಮಾಡಿದೆ.

ಶೇ.50ರಷ್ಟು ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡಬೇಕು. ಸರ್ಕಾರಿ ಮತ್ತು ಖಾಸಗಿ ವಲಯದ ಕಂಪನಿಗಳಲ್ಲೂ ಇದು ಕಡ್ಡಾಯ ಎಂದು ದೆಹಲಿ ಪರಿಸರ ಸಚಿವರು ತಿಳಿಸಿದ್ದಾರೆ. ಇನ್ನು ಪ್ರಾಥಮಿಕ ಶಾಲೆಗಳನ್ನು ಕೆಲ ದಿನಗಳ ಕಾಲ ಮುಚ್ಚಲು ಆದೇಶ ಹೊರಡಿಸಲಾಗಿದೆ.

Share Post