CrimeNational

ಲಾಲು ಪ್ರಸಾದ್‌ ಯಾದವ್‌ರ 6 ಕೋಟಿ ಆಸ್ತಿ ಜಪ್ತಿ ಮಾಡಿದ ಇಡಿ

ಪಾಟ್ನಾ; ರೈಲ್ವೆ ಉದ್ಯೋಗ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್‌ ಯಾದವ್‌ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಪಾಟ್ನಾದಲ್ಲಿ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ಲಾಲು ಯಾದವ್‌ ಹಾಗೂ ಅವರ ಕುಟುಂಬಕ್ಕೆ ಸೇರಿದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ.

ಪಾಟ್ನಾದ ನ್ಯೂ ಫ್ರೆಂಡ್ಸ್‌ ಕಾಲೋನಿಯಲ್ಲಿನ ವಸತಿ ಗೃಹ, ದೆಹಲಿ ಹಾಗೂ ಪಾಟ್ನಾದ ಇತರ ಆರು ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಿಕೊಳ್ಳಲಾಗಿದೆ.

Share Post