National

ಟ್ರಕ್‌-ಬೊಲೆರೊ ವಾಹನ ಮುಖಾಮುಖಿ ಡಿಕ್ಕಿ; ಆರು ಮಂದಿ ದಾರುಣ ಸಾವು..!

ಅಮೇಥಿ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಕಳೆದ ರಾತ್ರಿ ಭಿಕರ ಅಪಘಾತ ಸಂಭವಿಸಿದ್ದು, ಆರು ಮಂದಿ ದಾರುವಾಗಿ ಸಾವನ್ನಪ್ಪಿದ್ದಾರೆ. ಗೌರಿಗಂಜ್ ಪ್ರದೇಶದ ಬಾಬುಗಂಜ್ ಸಗ್ರಾ ಬಳಿ ಟ್ರಕ್‌ ಹಾಗೂ ಬೊಲೆರೋ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಮದುವೆಗೆ ಹೋಗುತ್ತಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ.

  ಕಾರಿನಲ್ಲಿದ್ದ ಹತ್ತು ಜನರ ಪೈಕಿ 5 ಮಂದಿ ಸ್ಥಳದಲ್ಲೇ ಮೃತಪಟ್ಟರು. ತೀವ್ರವಾಗಿ ಗಾಯಗೊಂಡಿದ್ದ ಒಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೃತರಲ್ಲಿ ಒಂದು ಮಗು ಕೂಡ ಸೇರಿದೆ. ಈ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳಾದ ಮುಖೇಶ್, ಅನುಜ್, ಅನಿಲ್ ಮತ್ತು ಲವಕುಶ​ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

   ಅಪಘಾತವಾಗಿದ್ದನ್ನು ಕಂಡ ಸ್ಥಳೀಯರು ಕೂಡಲೇ ರಕ್ಷಣೆಗೆ ಧಾವಿಸಿದರು. ಅನಂತರ ಪೊಲೀಸರಿಗೂ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಕಾರಿನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆದೂ, ಆಸ್ಪತ್ರೆಗೆ ಕರೆದೊಯ್ದರು. ನಾಲ್ವರು ಗಾಯಾಳುಗಳು ಸ್ಥಿತಿ ಕೂಡಾ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಲಖನೌ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ.

Share Post