ದೇವರ ದರ್ಶನಕ್ಕೆ ಹೋಗಿದ್ದ 6 ವಿದ್ಯಾರ್ಥಿಗಳು ನದಿ ಪಾಲು
ತಿರುಪುರ್: ಮಂಪಾರೈ ದೇವಸ್ಥಾನಕ್ಕೆ ಹೋಗಿದ್ದ ಆರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತಮಿಳುನಾಡಿನ ತಿರುಪುರ್ ಜಿಲ್ಲೆಯ ಧಾರವಾಪುರಂನಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರಲ್ಲಿ ಐವರು ಹೈಸ್ಕೂಲ್ ವಿದ್ಯಾರ್ಥಿಗಳಾಗಿದ್ದು, ಒಬ್ಬ ಕಾಲೇಜು ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಒಟ್ಟು ಎಂಟು ವಿದ್ಯಾರ್ಥಿಗಳು ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ನದಿ ನೀರಿನಲ್ಲಿ ಆಟವಾಡಲು ಹೋಗಿ ನೀರಿನಲ್ಲಿ ಮುಳುಗಿದ್ದಾರೆ. ಎಂಟು ಮಂದಿಯಲ್ಲಿ ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೃತರನ್ನು ಮೋಹನ್, ರಂಜಿತ್, ಅಮೀರ್, ಯುವನ್, ಚಕ್ರವರ್ಮಣಿ ಹಾಗೂ ಶ್ರೀಧರ್ ಎಂದು ಗುರುತಿಸಲಾಗಿದೆ.