National

ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; ಆರು ಕಾರ್ಮಿಕರು ಸಜೀವ ದಹನ

ಭರೂಚ್‌: ಇಂದು ಮುಂಜಾನೆ ಗುಜರಾತ್‌ನ ಭರೂಚ್‌ ಜಿಲ್ಲೆಯಲ್ಲಿ ಭಾರಿ ದುರಂತ ಸಂಭವಿಸಿದೆ. ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ 6 ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಅಹಮದಾಬಾದ್‌ನಿಂದ 235 ಕಿಲೋ ಮೀಟರ್‌ ದೂರದ ದಹೇಜ್ ಕೈಗಾರಿಕಾ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.

ಮೃತ ಆರೂ ಕಾರ್ಮಿಕರು ರಿಯಾಕ್ಟರ್‌ ಬಳಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅಂದರೆ ಮುಂಜಾನೆ 3 ಗಂಟೆ ಸುಮಾರಿಗೆ ದ್ರಾವಕ ಬಟ್ಟಿ ಇಳಿಸುವ ಪ್ರಕ್ರಿಯೆ ವೇಳೆ ಅದು ಏಕಾಏಕಿ ಸ್ಫೋಟ ಸಂಭವಿಸಿದೆ. ಹೀಗಾಗಿ ಸ್ಥಳದಲ್ಲೇ ಎಲ್ಲಾ ಆರೂ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸದ್ಯಕ್ಕೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಆರು ಮಂದಿ ಬಿಟ್ಟು ಬೇರೆ ಯಾರಿಗೂ ಯಾವುದೇ ರೀತಿಯಲ್ಲಿ ತೊಂದರೆಯಾಗಿಲ್ಲ. ಈ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share Post