National

7 ವರ್ಷದ ಬಾಲಕಿಯ ಅಪಹರಣ, ಅತ್ಯಾಚಾರ

ಉತ್ತರಪ್ರದೇಶ: ೭ ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ನಂತರ ಹತ್ಯೆ ಮಾಡಿರುವ ಘಟನೆ ಮೊರಾದಾಬಾದ್ ನ ಗ್ರಾಮದಲ್ಲಿ ನಡೆದಿದೆ.
ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಬಾಲಕಿ, ಡಿಸೆಂಬರ್‌ ೨೨ ರಂದು ಮನೆಯ ಮುಂದೆ ಆಟವಾಡುತ್ತಿದ್ದಾಗ ಕಾಣೆಯಾದಳು. ಈ ಸಂಬಂಧ ಕುಟುಂಬಸ್ಥರು ದೂರು ದಾಖಲಿಸಿದ ಮೇರೆಗೆ ಎರಡು ಪೊಲೀಸ್‌ ತಂಡಗಳನ್ನು ನಿಯೋಜಿಸಲಾಗಿತ್ತು. ಆದರೆ ಬಾಲಕಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ.
ರೈತರೊಬ್ಬರು ತಮ್ಮ ಜಮೀನಿಗೆ ತೆರಳಿದಾಗ ಕೊಳತೆ ಶವ ವಾಸನೆ ಬಂದಿದೆ. ನಂತರ ಕಬ್ಬಿನ ಗದ್ದೆಯಲ್ಲಿ ಶವ ಬಿದ್ದಿರುವುದು ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್‌ ಮತ್ತು ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿದ್ದಾರೆ.

Share Post