2047ರ ವೇಳೆ ಭಾರತದ ಅಭಿವೃದ್ಧಿ ಹೊಂದಿದ ರಾಷ್ಟ್ರ; ಮೋದಿ
ನವದೆಹಲಿ; 2047ರ ವೇಳೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು. ಆ ನಿಟ್ಟಿನಲ್ಲಿ ನಾವು ಮುಂದಡಿ ಇಡುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂಸತ್ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳುವ ಮೊದಲು ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸಲುವಾಗಿ ನಾವು ಹಲವು ತೀರ್ಮಾನಗಳನ್ನು ಮಾಡಲಿದ್ದೇವೆ. ಆ ತೀರ್ಮಾನಗಳನ್ನು ಹೊಸ ಸಂಸತ್ ಭವನದಲ್ಲಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ವಿಶೇಷ ಅಧಿವೇಶನ ಚಿಕ್ಕದು, ಆದ್ರೆ ಈ ಅಧಿವೇಶನದಲ್ಲಿ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. ನಾವು ಹೊಸ ಸಂಸತ್ ಭವನಕ್ಕೆ ಹೋಗುತ್ತಿದ್ದೇವೆ. ಇದರೊಂದಿಗೆ ನಾವು ಅಭಿವೃದ್ಧಿಯತ್ತ ಮುಂದಡಿ ಇಟ್ಟಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಐದು ದಿನಗಳ ಕಾಲ ಈ ವಿಶೇಷ ಅಧಿವೇಶನ ನಡೆಯಲಿದ್ದು, ಮೊದಲ ದಿನದ ನಂತರ ಹೊಸ ಸಂಸತ್ ಭವನದಲ್ಲಿ ಅಧಿವೇಶನ ಮುಂದುವರೆಯಲಿದೆ. ಈ ಅಧಿವೇಶನದಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ದೇಶವನ್ನು ಇಂಡಿಯಾ ಬದಲಾಗಿ, ಭಾರತ ಎಂದಷ್ಟೇ ಕರೆಯುವ ತೀರ್ಮಾನ ಕೂಡಾ ಕೈಗೊಳ್ಳುವ ಸಾಧ್ಯತೆ ಇದೆ.