National

ಸೊಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ; ನಾಲ್ವರ ದುರ್ಮರಣ

ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ. ಟ್ರಕ್‌ ಮತ್ತು ಟ್ರ್ಯಾಕ್ಟರ್‌ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ಈ ದುರಂತ ನಡೆದಿದೆ. ಘಟನೆಯಲ್ಲಿ 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಎಲ್ಲರೂ ಸೊಲ್ಲಾಪುರದ ತುಳಜಾಪುರ ತಾಲ್ಲೂಕಿನ ಕಡಮವಾಡಿ ನಿವಾಸಿಗಳೆಂದು ತಿಳಿದುಬಂದಿದೆ. ಎಲ್ಲರೂ ಟ್ರ್ಯಾಕ್ಟರ್‌ನಲ್ಲಿ ಕೆಲಸಕ್ಕೆಂದು ಪಂಡರಾಪುರಕ್ಕೆ ಹೊರಟಿದ್ದರು. ಈ ವೇಳೆ ಕೊಂಡಿಕೇಗಾಂವ್‌ ಎಂಬಲ್ಲಿ ಹಿಂದಿನಿಂದ ಬಂದ ಟ್ರಕ್‌ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.

ಗಾಯಾಳುಗಳಲ್ಲಿ ಆರು ಮಂದಿ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲಾ ಗಾಯಾಳುಗಳನ್ನು ಸೊಲ್ಲಾಪುರ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

 

Share Post