SERIAL BLAST CASE: 38 ಅಪರಾಧಿಗಳಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ
ಅಹಮದಾಬಾದ್: 2008ರಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಇಂದು ಅಹಮದಾಬಾದ್ ವಿಶೇಷ ನ್ಯಾಯಾಲಯ ಪ್ರಕರಣದ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟ ಮಾಡಿದೆ. ಪ್ರಕರಣದಲ್ಲಿ ಒಟ್ಟು 49 ಮಂದಿಯನ್ನು ಅಪರಾಧಿಗಳೆಂದು ಘೋಷಣೆ ಮಾಡಲಾಗಿತ್ತು. ಇದ್ರಲ್ಲಿ 38 ಮಂದಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಉಳಿದ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
2008ರಲ್ಲಿ ಅಹಮದಾಬಾದ್‌ನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲಾಗಿತ್ತು. ಈ ಭೀಕರ ಬಾಂಬ್ ದಾಳಿಯಲ್ಲಿ ಪಟ್ಟು 56 ಮಂದಿ ಸಾವನ್ನಪ್ಪಿದ್ದರು. ನೂರಾರು ಮಂದಿ ಘಟನೆಯಲ್ಲಿ ಗಾಯಗೊಂಡಿದ್ದರು. ಈ ಪ್ರಕರಣದಿಂದ ಇಡೀ ದೇಶವೇ ಬೆಚ್ಚಿಬಿದ್ದಿತ್ತು.