National

ಲೋಕಸಭಾ ಸದಸ್ಯತ್ವ ಸ್ಥಾನಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ರಾಜೀನಾಮೆ

ದೆಹಲಿ: ಯುಪಿ ಸಂಸದ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಗಳವಾರ (ಮಾರ್ಚ್ 22) ಅಖಿಲೇಶ್ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಕಚೇರಿಗೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.  ಯುಪಿ ವಿಧಾನಸಭೆ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅವರು ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಅಖಿಲೇಶ್ ಅವರು ಬಿಜೆಪಿಯ ಎಸ್ಪಿ ಸಿಂಗ್ ಬಘೇಲ್ ವಿರುದ್ಧ 60,000 ಕ್ಕೂ ಹೆಚ್ಚು ಮತಗಳಿಂದ ಗೆದ್ದು,  ಶಾಸಕರಾಗಿ ಆಯ್ಕೆಯಾದರು. 403 ಸ್ಥಾನಗಳನ್ನು ಹೊಂದಿರುವ ಯುಪಿಯಲ್ಲಿ ಅಖಿಲೇಶ್ ಸಮಾಜವಾದಿ ಪಕ್ಷ 111 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಏಕೈಕ ಪಕ್ಷವಾಗಿ ಕಣಕ್ಕೆ ಇಳಿದಿದ್ದು, 255 ಸ್ಥಾನಗಳನ್ನು ಗೆದ್ದು ಯುಪಿಯಲ್ಲಿ ಮತ್ತೆ ಅಧಿಕಾರವನ್ನು ಪಡೆದುಕೊಂಡಿದೆ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು 2019 ರಲ್ಲಿ ಅಜಂಗಢ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ರು.

ಅಖಿಲೇಶ್ ಕಳೆದ ಸಂಸತ್ ಚುನಾವಣೆಯಲ್ಲಿ ಅಜಂಗಢ ಸಂಸದರಾಗಿ ಆಯ್ಕೆಯಾಗಿದ್ದರು. ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಖಿಲೇಶ್ ಅವರು ಯುಪಿ ಸಿಎಂ ಆದಿತ್ಯನಾಥ್ ಅವರ ವಿಧಾನಸಭೆಯಲ್ಲಿ ಶಾಸಕರಾಗಿ ಮುಂದುವರಿಯಲಿದ್ದಾರೆ.

ಅಖಿಲೇಶ್ ರಾಷ್ಟ್ರ ರಾಜಕಾರಣಕ್ಕಿಂತ ರಾಜ್ಯ ರಾಜಕಾರಣದತ್ತ ಗಮನ ಹರಿಸಿದ್ದಾರೆ. ಅದಕ್ಕಾಗಿಯೇ ಅವರು ಲೋಕಸಭೆಗೆ ರಾಜೀನಾಮೆ ನೀಡಿ ಹೊಸದಾಗಿ ಆಯ್ಕೆಯಾದ ಶಾಸಕ ಸ್ಥಾನದಲ್ಲಿ ಮುಂದುವರಿಯಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಯುಪಿ ಅಸೆಂಬ್ಲಿ ಅಧಿವೇಶನದಲ್ಲಿ ಪ್ರಮುಖ ಪ್ರತಿಪಕ್ಷ ಸ್ಥಾನಮಾನದ ಕುರಿತು ಯೋಗಿ ಸರ್ಕಾರ ಮತ್ತು ಎಸ್‌ಪಿ ನಡುವಿನ ತೀವ್ರ ಹೋರಾಟ ಮುಂದುವರಿಯಲಿದೆ.

Share Post