ತೆಲಂಗಾಣದ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ
ಹೈದರಾಬಾದ್ : 2022-23 ಶೈಕ್ಷಣಿಕ ವರ್ಷದಲ್ಲಿ ಸರ್ಕಾರ ಸಾಕಷ್ಟು ಬದಲಾವಣೆ ಮಾಡಲು ನಿರ್ಧರಿಸಿದೆ. ಖಾಸಗಿ ಶಾಲೆಗಳು, ಜೂನಿಯರ್ ಮತ್ತು ಪದವಿ ಕಾಲೇಜುಗಳ ವಾರ್ಷಿಕ ಶುಲ್ಕಗಳ ಮೇಲೆ ಕಡಿವಾಣ ಹಾಕಲು ತೀರ್ಮಾನಿಸಿದೆ.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಆಂಗ್ಲ ಮಾಧ್ಯಮ ಶಿಕ್ಷಣ ಪರಿಚಯಿಸಲು ಸರ್ಕಾರ ತೀರ್ಮಾನಿಸಿದೆ. ಸೋಮವಾರ ನಡೆದ ಸಭೆಯಲ್ಲಿ ಈ ವಿಚಾರವನ್ನು ಚರ್ಚಿಸಿ ಸರ್ಕಾರ ನಿರ್ಧಾರ ಕೈಗೊಂಡಿದೆ. ಶಿಕ್ಷಣ ಸಚಿವೆ ಸುಬಿತಾ ಇಂದ್ರ ರೆಡ್ಡಿ ನೇತೃತ್ವದಲ್ಲಿ ಈ ವಿಷಯಗಳ ಕುರಿತು ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಮನ ವೂರು ಮನ ಬಡಿ ಯೋಜನೆಗೆ ಒಪ್ಪಿಗೆ ಸೂಚಿಸಿದೆ. ಈ ಯೋಜನೆಗೆ 7289ಕೋಟಿ ದುಡ್ಡನ್ನು ಸರ್ಕಾರ ಹೂಡಲಿದೆ.
ಸರ್ಕಾರವು ಇಂಗ್ಲಿಷ್ ಮಾಧ್ಯಮದಲ್ಲಿ ಭೋದನೆ ಮಾಡಿದರೆ ಗ್ರಾಮೀಣ ಜನರು ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಾರೆ ಎಂದು ಸರ್ಕಾರ ಈ ಮಹತ್ವದ ನಿರ್ಧರ ತೆಗೆದುಕೊಂಡಿದೆ.