ಮೋದಿ, ಅಮಿತ್ ಶಾ ಬಳಿ ಮೈತ್ರಿ ಬಗ್ಗೆ ಮಾತನಾಡಿದ್ದೇನೆ : ಅಮರಿಂದರ್ ಸಿಂಗ್
ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಕಾಂಗ್ರೆಸ್ ತೊರೆದಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಬಿಜೆಪಿಯೊಂದಿಗೆ ಮೈತ್ರಿಗೆ ಮುಂದಾಗಿದ್ದಾರೆ. ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆದರೆ ಪಂಜಾಬ್ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ಸಿಂಗ್ ಹೇಳಿದ್ದರು. ಅಂತೆಯೇ ಈಗ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದಾರೆ.
ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಸಂಬಂಧ ಈಗಾಗಲೇ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದೇನೆ. ಶನಿವಾರದಂದು ಬಿಜೆಪಿ ರಾಷ್ಟ್ರಾಧ್ಯಾಕ್ಷರನ್ನು ಭೇಟಿಯಾಗಲಿದ್ದೇನೆ ಎಂದು ಮಾಜಿ ಸಿಎಂ ಅಮರೀಂದರ್ ಸಿಂಗ್ ಹೇಳಿದ್ದಾರೆ.
ಕಾಂಗ್ರೆಸ್‌ನ ಯಾವುದೇ ಶಾಸಕರು ತನ್ನ ಬೆಂಬಲಕ್ಕೆ ನಿಂತಿಲ್ಲ ಎಂಬ ಮಾತುಗಳನ್ನು ಅಮರೀಂದರ್ ಸಿಂಗ್ ತಳ್ಳಿಹಾಕಿದ್ದಾರೆ. ಕಾಂಗ್ರೆಸ್‌ನ ಅನೇಕ ಶಾಸಕರು ತಮ್ಮೊಂದಿಗೆ ಸೇರಲು ಉತ್ಸುಕರಾಗಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಗಾಗಿ ಕಾಯುತ್ತಿದ್ದಾರೆ ಎಂದು ಸಿಂಗ್ ತಿಳಿಸಿದ್ದಾರೆ.