National

ಅಮರನಾಥದಲ್ಲಿ ಮೇಘಸ್ಫೋಟ ಸಂಭವಿಸಿಲ್ಲ; ಹವಾಮಾನ ಇಲಾಖೆ ಸ್ಪಷ್ಟನೆ

ನವದೆಹಲಿ; ದಕ್ಷಿಣ ಕಾಶ್ಮೀರದ ಪ್ರಸಿದ್ಧ ಅಮರನಾಥ ದೇವಾಲಯದ ಬಳಿ ಮೇಘಸ್ಫೋಟ ಸಂಭವಿಸಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸ್ಪಷ್ಟನೆ ನೀಡಿದೆ. ಸ್ಥಳೀಯವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಬೆಟ್ಟದ ತಪ್ಪಲಿನಲ್ಲಿ ದಿಢೀರ್ ಪ್ರವಾಹದ ಸ್ಥಿತಿ ಉಂಟಾಗಿದೆ ಅಷ್ಟೇ ಎಂದು ಹೇಳಿದೆ.

ಈ ಮೊದಲು ಅಮರನಾಥದಲ್ಲಿ ಮೇಘಸ್ಫೋಟವಾಗಿದೆ ಎಂದು ಏಜೆನ್ಸಿಗಳು ವರದಿ ಮಾಡಿದ್ದವು. ಘಟನೆಯಲ್ಲಿ 16 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಹವಾಮಾನ ತಜ್ಞರ ಪ್ರಕಾರ, ಶುಕ್ರವಾರ ಸಂಜೆ 4.30ರಿಂದ 6.30ರ ನಡುವೆ ಅಮರನಾಥದಲ್ಲಿ 31 ಮಿ.ಮೀ ಮಳೆಯಾಗಿದೆ. ಹಾಗಾಗಿ ಇದನ್ನು ಮೇಘಸ್ಫೋಟ ಎಂದು ವರ್ಗೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅಮರನಾಥ ಗುಹಾ ದೇವಾಲಯದ ಸಮೀಪದಲ್ಲಿರುವ ಪರ್ವತ ಶ್ರೇಣಿಯಲ್ಲಿ ಸುರಿದ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿರಬಹುದು ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

Share Post