NationalPolitics

ಆಂಧ್ರಪ್ರದೇಶದ ಮಾಜಿ ಸಿಎಂ ರೋಸಯ್ಯ ಇನ್ನಿಲ್ಲ

ಹೈದರಾಬಾದ್:‌ ಅಖಂಡ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ರೋಸಯ್ಯ ಇಂದು ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಇದ್ದಕ್ಕಿದ್ದಂತೆ ಬಿಪಿ ಕಡಿಮೆಯಾಗಿತ್ತು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ, ಮಾರ್ಗಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

   ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾಗಿದ್ದ ರೋಸಯ್ಯಗೆ 88 ವರ್ಷ ವಯಸ್ಸಾಗಿತ್ತು.  2009 ರಿಂದ 2010ರವರೆಗೆ ರೋಸಯ್ಯ ಅವರು ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 2011 ರಿಂದ 2016ರವರೆಗೆ ತಮಿಳುನಾಡಿನ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಎರಡು ತಿಂಗಳ ಕಾಲ ಕರ್ನಾಟಕದ ರಾಜ್ಯಪಾಲರಾಗಿಯೂ ಕೆಲಸ ಮಾಡಿದ್ದರು.

   ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಸೇವೆ ಸಲ್ಲಿಸಿದ್ದರು. ಸುಮಾರು 50 ವರ್ಷಗಳಿಂದ ತಮ್ಮ ರಾಜಕೀಯ ಜೀವನದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು.

Share Post