CrimeNationalPolitics

ಚಂದ್ರಬಾಬು ನಾಯ್ಡು ಜಾಮೀನು ಅರ್ಜಿ ತಿರಸ್ಕರಿಸಿದ ಆಂಧ್ರ ಹೈಕೋರ್ಟ್‌

ಅಮರಾವತಿ; ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ಅವರಿಗೆ ಮತ್ತೊಮ್ಮೆ ಆಂಧ್ರಪ್ರದೇಶ  ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಅವರ ಪರವಾಗಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿದೆ.

ಅಮರಾವತಿ ಇನ್ನರ್ ರಿಂಗ್ ರೋಡ್ ಮತ್ತು ಎಪಿ ಫೈಬರ್ ನೆಟ್ ಪ್ರಕರಣಗಳ ಜೊತೆಗೆ ಅಂಗಲ್ಲು ಪ್ರಕರಣದಲ್ಲೂ ಅವರ ವಿರುದ್ಧ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಮೂರು ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ.

ಆ ಮೂಲಕ ಈ ಪ್ರಕರಣಗಳಲ್ಲಿ ಪಿಟಿ ವಾರೆಂಟ್ ಕೋರಿ ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಗೆ ಎಸಿಬಿ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಪಿಟಿ ವಾರೆಂಟ್‌ಗಳ ಕುರಿತು ಎಸಿಬಿ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

ಚಂದ್ರಬಾಬು ನಾಯ್ಡು ಅವರು ಒಂದು ತಿಂಗಳಿನಿಂದ ಜೈಲಿನಲ್ಲಿದ್ದು, ಜಾಮೀನಿಗಾಗಿ ಹಲವು ಬಾರಿ ಅರ್ಜಿ ಸಲ್ಲಿಸಿದರೂ ಕೋರ್ಟ್‌ ಮನ್ನಣೆ ಕೊಟ್ಟಿಲ್ಲ.

Share Post