ಗುರುಕುಲದಲ್ಲಿ ಮೂವರು ವಿದ್ಯಾರ್ಥಿಗಳಿಗೆ ಹಾವು ಕಡಿತ, ಓರ್ವ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ
ಆಂಧ್ರಪ್ರದೇಶ: ಎಪಿಯ ವಿಜಯನಗರ ಜಿಲ್ಲೆಯ ಕುರ್ರಪಾಲಂಲ್ಲಿರುವ ಮಹಾತ್ಮ ಜ್ಯೋತಿಬಾಪುಲೆ ಬಿಸಿ ಬಾಲಕರ ಗುರುಕುಲ ವಿದ್ಯಾಲಯದಲ್ಲಿ ಮಲಗಿದ್ದ ವಿದ್ಯಾರ್ಥಿಗಳಿಗೆ ಹಾವು ಕಚ್ಚಿರುವ ಆತಂಕಕಾರಿ ಘಟನೆ ನಡೆದಿದೆ. ಘಟನೆಯಿಂದ ಭಯಭೀತರಾದ ಹಾಸ್ಟೆಲ್ ಸಿಬ್ಬಂದಿ ಕೂಡಲೇ ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಹಾವು ಕಚ್ಚಿದ ವಿಷಯ ತಿಳಿದ ಹಾಸ್ಟೆಲ್ ಸಿಬ್ಬಂದಿ ಮೂವರು ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಮೂವರು ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ರಾತ್ರಿ 1 ಗಂಟೆ ಸುಮಾರಿಗೆ ಹಾಸ್ಟೆಲ್ ಕೊಠಡಿಯಲ್ಲಿ ಮಲಗಿದ್ದ ವಿದ್ಯಾರ್ಥಿಗಳಿಗೆ ಹಾವು ಕಚ್ಚಿದೆ ಎಂದು ಹೇಳಲಾಗ್ತಿದೆ. ಸಿಬ್ಬಂದಿ ಕೂಡಲೇ ವಿದ್ಯಾರ್ಥಿಗಳನ್ನು ಪಾರ್ವತಿಪುರಂನಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ರು. ಪರಿಸ್ಥಿತಿ ಗಂಭೀರವಾಗಿದ್ದ ಕಾರನದಿಂದ ಮೂವರು ವಿದ್ಯರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯನಗರದ ತಿರುಮಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ವೇಳೆ ಮೂವರು ವಿದ್ಯಾರ್ಥಿಗಳಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಮೂವರು ವಿದ್ಯಾರ್ಥಿಗಳನ್ನು ರಂಜಿತ್, ಈಡುಬುಲ್ಲಿ ವಂಶಿ ಮತ್ತು ವಂಗಪಾಂಡು ನವೀನ್ ಎಂದು ತಿಳಿದುಬಂದಿದೆ. ಎಲ್ಲರೂ ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನುಳಿದ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ರಂಜಿತ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.