National

ಎಸಿಬಿ ರದ್ದು ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಖಾಸಗಿ ಅರ್ಜಿ

ನವದೆಹಲಿ; ಎಸಿಬಿ ರದ್ದುಗೊಳಿಸಿದ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಖಾಸಗಿ ಅರ್ಜಿ ಸಲ್ಲಿಕೆಯಾಗಿದೆ. ಕನಕರಾಜು ಎಂಬವರು ಮೇಲ್ಮನವಿ ಸಲ್ಲಿಸಿದ್ದು, ಈ ಅರ್ಜಿಯನ್ನು ವಿಚಾರಣೆಗೆ ಲಿಸ್ಟ್‌ ಮಾಡಲು ಮುಖ್ಯ ನ್ಯಾಯಮೂರ್ತಿ ರಮಣ ಸೂಚಿಸಿದ್ದಾರೆ.

ಇಬ್ಬರು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಲಂಚ ಕೇಳಿದ್ದ ಆರೋಪ ಮಾಡಿ ಕನಕರಾಜು ದೂರು ಸಲ್ಲಿಸಿದ್ದರು. ದೂರಿನ ವಿಚಾರಣೆ ನಡೆಯುತ್ತಿದ್ದಾಗ ಎಸಿಬಿಯನ್ನು ರದ್ದುಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಎಸಿಬಿ ರದ್ದು ಮಾಡಿರುವುದು ತಪ್ಪು. ಕೇಸುಗಳ ತನಿಖೆ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ಹೈಕೋರ್ಟ್ ತೀರ್ಪಿಗೆ ತಡೆ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Share Post