NationalPolitics

ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್‌ಗೆ ಸೇರಿಸಬೇಕು; ಡಿ.ಕೆ.ಶಿವಕುಮಾರ್‌

ನವದೆಹಲಿ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಈಶ್ವರ್‌ ಖಂಡ್ರೆ ಅವರ ಬಗ್ಗೆ ಕೇವಲವಾಗಿ ಮಾತನಾಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ ಹೊರಹಾಕಿದ್ದಾರೆ.

ಆರಗ ಜ್ಞಾನೇಂದ್ರ ಅವರು ಮಾನಸಿಕವಾಗಿ ಆಧೋಗತಿಗೆ ಇಳಿದಿರಬೇಕು. ಹೀಗಾಗಿಯೇ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರಿಗೆ ಚಿಕಿತ್ಸೆ ಅಗತ್ಯವಿದೆ. ಬೆಂಗಳೂರಿನಲ್ಲಿ ಒಳ್ಳೆಯ ಚಿಕಿತ್ಸೆ ನೀಡುವ ನಿಮ್ಹಾನ್ಸ್‌ ಆಸ್ಪತ್ರೆ ಇದೆ. ಚಿಕಿತ್ಸೆ ಪಡೆಯಲು ಬೇಕಾದರೆ ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ಅರಣ್ಯವೇ ಇಲ್ಲದ ಭಾಗದವರನ್ನು ಅರಣ್ಯ ಮಂತ್ರಿ ಮಾಡಲಾಗಿದೆ. ಆ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಮಲ್ಲಿಕಾರ್ಜುನ ಖರ್ಗೆಯವರನ್ನು ನೋಡಿದರೆ ಗೊತ್ತಾಗುತ್ತೆ ಅಲ್ಲಿನವರ ಸ್ಥಿತಿ ಎಂದು ಆರಗ ಜ್ಞಾನೇಂದ್ರ ಹೇಳಿದ್ದರು. ಇದಕ್ಕೆ ಡಿ.ಕೆ.ಶಿವಕುಮಾರ್‌ ಮೇಲಿನಂತೆ ಪ್ರತಿಕ್ರಿಯೆ ನೀಡಿದ್ದಾರೆ.

 

Share Post