National

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಕೊರೊನಾ ಪಾಸಿಟಿವ್

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಕೊರೊನಾ ಪಾಸಿಟಿವ್‌ ದೃಢವಾಗಿದೆ. ಮೂರನೇ ಅಲೆ ಎಲ್ಲೆಡೆ ವ್ಯಾಪಿಸುತ್ತಿದ್ದು ತೀವ್ರ ನಿಗಾ ವಹಿಸುವ ಪರಿಸ್ಥಿತಿ ಬಂದೊದಗಿದೆ.

ಕೊರೊನಾ ಪಾಸಿಟಿವ್‌ ಇರುವ ಕಾರಣ ಅರವಿಂದ್‌ ಕೇಜ್ರಿವಾಲ್‌ ಅವರು ಮನೆಯಲ್ಲಿಯೇ ಐಸೋಲೇಟ್‌ ಆಗಿದ್ದಾರೆ. ಇನ್ನು ನನ್ನ ಸಂಪರ್ಕಕ್ಕೆ ಬಂದಿರುವವರು ಈ ಕೂಡಲೇ ಹೋಗಿ ಪರೀಕ್ಷಿಸಿಕೊಳ್ಳಿ ಎಂದು ಕೂಡ ಅರವಿಂದ್‌ ಕೇಜ್ರಿವಾಲ್‌ ಸೂಚನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ಅರವಿಂದ್‌ ಕೇಜ್ರಿವಾಲ್‌ ಹಂಚಿಕೊಂಡಿದ್ದಾರೆ.

Share Post