National

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌; ಮೂವರು ಪಾಕ್‌ ಉಗ್ರರ ಹತ್ಯೆ

ಶ್ರೀನಗರ; ಜಮ್ಮು ಕಾಶ್ಮೀರದಲ್ಲಿ ಇಂದು ಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಈ ಎನ್‌ಕೌಂಟರ್‌ ನಡೆದಿದೆ.

ಬಾರಾಮುಲ್ಲಾದ ಕ್ರೀರಿ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ. ಉ್ರಗರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರು ಹತರಾಗಿದ್ದು, ಒಬ್ಬ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಕಾಶ್ಮೀರದ ಐಜಿಪಿ ವಿಜಯ್‌ ಕುಮಾರ್ ಮಾಹಿತಿ ನೀಡಿದ್ದಾರೆ.

Share Post