National

ಎಂಟು ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ; ಸುಪ್ರೀಂ ಕೋರ್ಟ್‌ ತಾಕೀತು

ನವದೆಹಲಿ; ಎಂಟು ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ. ಇಂದು ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ವಾರ್ಡ್‌ ವಿಂಗಡಣೆ ಮಾಡುವುದಿದ್ದರೆ ಮಾಡಿ, ಎಂಟು ವಾರಗಳಲ್ಲಿ ಚುನಾವಣೆ ನಡೆಸುವಂತೆ ಸೂಚನೆ ನೀಡಿದೆ.

 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಸುಪ್ರೀಂಕೋರ್ಟ್‌ ಸೂಚನೆಯಂತೆ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ನಾವು ಚುನಾವಣೆಗೆ ಎಲ್ಲಾ ರೀತಿಯಿಂದಲೂ ಸರ್ವಸನ್ನದ್ಧರಾಗಿದ್ದೇವೆ ಎಂದು ಹೇಳಿದರು.

 

ಇನ್ನ ಇದೇ ವೇಳೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸುವುದು ಅನುಮಾನ. ಮತ್ತೆ ಏನೇನು ಸಬೂಬು ಹೇಳುತ್ತೋ ಗೊತ್ತಿಲ್ಲ. ಈಗಲೇ ಚುನಾವಣೆ ನಡೆಸಿದರೆ ನಾವು ಸಿದ್ಧರಿದ್ದೇವೆ. ಸುಪ್ರೀಂ ಕೋರ್ಟ್‌ ಆದೇಶವನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

Share Post