National

ಸಿಎಂ ಆದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಪಂಜಾಬ್‌ ಸಿಎಂ

ದೆಹಲಿ: ಭಗವಂತ್ ಮಾನ್ ಪಂಜಾಬ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿದ್ದಾರೆ. ಮಾರ್ಚ್ 24, 2022 ರಂದು ಗುರುವಾರ ಬೆಳಿಗ್ಗೆ ದೆಹಲಿಗೆ ಆಗಮಿಸಿದ ಅವರು ನೇರವಾಗಿ ಪ್ರಧಾನಿ ಕಚೇರಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೋದಿ, ಮಾನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕೇಂದ್ರದಿಂದ ಅಗತ್ಯವಿರುವ ಎಲ್ಲ ನೆರವು ನೀಡಲಾಗುವುದು ಎಂದು ಮೋದಿ ಭರವಸೆ ನೀಡಿದರು. ಇವರಿಬ್ಬರ ಭೇಟಿ ವೇಳೆ ರಾಜಕೀಯ ವಿಷಯಗಳು ಚರ್ಚೆ ಮಾಡಲಿಲ್ಲ. ಕೇವಲ ಸೌಜನ್ಯದ ಭೇಟಿ ಎನ್ನಲಾಗಿದೆ. ಮೋದಿ ಅವರನ್ನು ಭೇಟಿ ಮಾಡಿದ ನಂತರ ಅವರು ಆಪ್ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲಿದ್ದಾರೆ.

ಪಂಚರಾಜ್ಯಗಳ ಚುನಾವಣೆಯ ಅಂಗವಾಗಿ ಪಂಜಾಬ್ ರಾಜ್ಯದಲ್ಲಿ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ  117 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ರಾಜ್ಯದಲ್ಲಿ ಎಎಪಿ ಒಟ್ಟು 92 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿಯಿತು.  16ರಂದು ಭಗತ್ ಸಿಂಗ್ ಅವರ ಪೂರ್ವಿಕರ ಗ್ರಾಮವಾದ ಖಟ್ಕರ್ಕಲನ್ ನಲ್ಲಿ ಪಂಜಾಬ್ ಮುಖ್ಯಮಂತ್ರಿಯಾಗಿ ಭಗವಂತ್‌ ಮಾನ್  ಪ್ರಮಾಣ ವಚನ ಸ್ವೀಕರಿಸಿದರು. ಹಾಸ್ಯನಟನಿಂದ ಮುಖ್ಯಮಂತ್ರಿಯವರೆಗೆ ನಡೆದ ಬದುಕಿನಲ್ಲಿ ಅನೇಕ ಸೋಲು ಮತ್ತು ಗೆಲುವನ್ನು ಕಂಡಿದ್ದಾರೆ. ಟೀಕಾಕಾರರಿಗೆ ಗೆಲುವಿನ ಮೂಲಕವೇ ಉತ್ತರಿಸಿದರು.

 

Share Post