National

ಬಿಪಿನ್‌ ರಾವತ್‌ ಸೇನಾ ಹೆಲಿಕಾಪ್ಟರ್‌ ದುರಂತ; ಮೋದಿ ಭೇಟಿಯಾದ ರಾಜನಾಥ್‌ ಸಿಂಗ್‌

ನವದೆಹಲಿ: ಭಾರತೀಯ ವಾಯುಪಡೆಯ ಎಂಐ ೧೭ ವಿ ೫ ಹೆಲಿಕಾಪ್ಟರ್‌ ದುರಂತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಕಾಣೆಯಾದವರ ಹುಡುಕಾಟ ನಡಸಲಾಗುತ್ತಿದೆ. ಇನ್ನು ಘಟನೆಯಲ್ಲಿ ನಾಲ್ಕಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಮೂರೂ ಸೇನಾಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಹಾಗೂ ಅವರ ಪತ್ನಿ ಸೇರಿ ಒಂಭತ್ತು ಮಂದಿ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಕೊಯಮತ್ತೂರಿನಿಂದ ಪ್ರಯಾಣಿಸುತ್ತಿದ್ದಾಗ ಕೂನೂರು ಬಳಿ ದುರಂತ ಸಂಭವಿಸಿದೆ. ಬಿಪಿನ್‌ ರಾವತ್‌ ಅವರಿಗೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಅವರ ಆರೋಗ್ಯ ಸ್ಥಿತಿ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ಅವರ ಪತ್ನಿ ಬಗ್ಗೆಯೂ ಮಾಹಿತಿ ಸಿಕ್ಕಿಲ್ಲ.

ವೆಲ್ಲಿಂಗ್ಟನ್‌ನಲ್ಲಿರುವ ಸೇನಾ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಪಿನ್‌ ರಾವತ್‌ ತೆರಳುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಹವಾಮಾನ ವೈಪರೀತ್ಯವೇ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

Share Post