National

GOA RESULTS; ರಾಜ್ಯಪಾಲರನ್ನು ಭೇಟಿ ಮಾಡಲಿರುವ ಬಿಜೆಪಿ

ಗೋವಾ: ಗೋವಾದಲ್ಲಿ ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೇರು ತವಕದಲ್ಲಿದೆ. ಗೋವಾದಲ್ಲಿ ಅಧಿಕಾರ ಹಿಡಿಯಲು 21 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು. ಆದ್ರೆ ಬಿಜೆಪಿ 19 ಸ್ಥಾನಗಳಲ್ಲಿ ಮುಂದಿದ್ದು, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಕಾಣುತ್ತಿದೆ.

ಸದ್ಯದ ಪರಿಸ್ಥಿತಿಯೇ ಮುಂದವರೆದರೆ ಗೋವಾದಲ್ಲಿ ಅತಂತ್ರ  ಸ್ಥಿತಿ ಏರ್ಪಡಲಿದೆ. ಹೀಗಾಗಿ, ಕಾಂಗ್ರೆಸ್‌ ಪಕ್ಷದವರನ್ನು ಸೇರಿಸಿಕೊಂಡು ಅಧಿಕಾರ ಹಿಡಿಯುವ ಬಗ್ಗೆ ಚಿಂತನೆ ನಡೆಸುತ್ತಿದೆ. ಇದಕ್ಕಾಗಿ ಅದು ರೆಸಾರ್ಟ್‌ ರಾಜಕಾರಣ ಆರಂಭಿಸಿದೆ. ಹೀಗಿರುವಾಗಲೇ, ಬಿಜೆಪಿ ಪಾರ್ಟಿ ಗೋವಾ ರಾಜ್ಯಪಾಲರನ್ನು ಭೇಟಿ ಮಾಡಲು ಮುಂದಾಗಿದೆ. ರಾಜ್ಯಪಾಲ ಶ್ರೀಧರನ್‌ ಪಿಳ್ಳೈ ಅವರನ್ನು ಭೇಟಿ ಮಾಡಲಿರುವ ಗೋವಾ ಬಿಜೆಪಿ ನಾಯಕರು, ಬಿಜೆಪಿಗೆ ಅತಿ ಹೆಚ್ಚು ಸ್ಥಾನಗಳು ಬಂದಿದ್ದು, ಸರ್ಕಾರ ರಚಿಸಲು ಅನುಮತಿ ನೀಡುವಂತೆ ಹಕ್ಕು ಮಂಡಿಸಲು ಮುಂದಾಗಿದ್ದಾರೆ.

Share Post